ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದರಿಂದ ಎಂಟನೆ ತರಗತಿಯ ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆಯನ್ನು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಜೂ.20ರಿಂದ ಜು.15ರವೆರೆಗೆ ಅಥವಾ ಮುಂದಿನ ಆದೇಶದವರೆಗೆ ವಿತರಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ.
2023-24ನೇ ಸಾಲಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಂದರಿಂದ ಎಂಟನೆ ತರಗತಿಯ ಮಕ್ಕಳಿಗೆ ರಕ್ತಹೀನತೆ ನಿವಾರಣೆಗಾಗಿ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದಲ್ಲಿ ಒಂದು ದಿನ ನೀಡುವಂತೆ ತಿಳಿಸಲಾಗಿದೆ. ಮೊಟ್ಟೆಯೊಂದಕ್ಕೆ 6 ರೂ.ಗಳನ್ನು ನಿಗದಿಪಡಿಸಿದೆ.
ಕಲ್ಯಾಣ ಕರ್ನಾಟಕ ವಿಭಾಗದ 8 ಜಿಲ್ಲೆಗಳಾದ ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಅನುದಾನದಲ್ಲಿ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆಯನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಟಾನ ಮಾಡುವಂತೆ ಸೂಚಿಸಲಾಗಿದೆ.
Home ಇತ್ತೀಚಿನ ಸುದ್ದಿಗಳು ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡಲು ಸರಕಾರದ ಸುತ್ತೋಲೆ