ಪುತ್ತೂರು:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಪುತ್ತೂರು ಸಂಯುಕ್ತ ಆಶ್ರಯದಲ್ಲಿ ವಿಶ್ವಯೋಗ ದಿನ ಮಾಹಿತಿ ಕಾರ್ಯಾಗಾರವು ಜೂ.21ರಂದು ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸರಿತಾ ಡಿ ಮಾತನಾಡಿ, ನಿರಂತರವಾಗಿ ಯೋಗ ಮಾಡಯುವುದರಿಂದ ಮಾನವನ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ. ಇದು ಮಾನವನ ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಯೋಗವು ಪ್ರಮುಖ ಪಾತ್ರವಹಿಸುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ ಮಾತನಾಡಿ, ಮನಸ್ಸು, ಆರೋಗ್ಯವನ್ನು ಸಮಾನ ರೀತಿಯಲ್ಲಿ ಕೊಂಡೊಯ್ಯುವಲ್ಲಿ ಯೋಗವು ಪರಿಣಾಮಕಾರಿಯಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ನ್ಯಾಯವಾದಿ ಶ್ರೀಗಿರೀಶ್ ಮಳಿ ಯೋಗದ ಮಹತ್ವದ ಬಗ್ಗೆ ಮಾಹಿತಿ ನೀಡಿ ಸರಳ ಯೋಗಾಭ್ಯಾಸ ನಡೆಸಿಕೊಟ್ಟರು.
ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾಗಿರುವ ಗೌಡ ಆರ್.ಪಿ., 2ನೇ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ಮಯ ರೈ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಸೀಮಾ ನಾಗರಾಜ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ನ್ಯಾಯಾಲಯದ ಸಿಬ್ಬಂದಿಗಳು ಹಾಗೂ ವಕೀಲರು ಶಿಬಿರದಲ್ಲಿ ಭಾಗವಹಿಸಿದ್ದರು.