ಪೆರಿಯಶಾಂತಿ: ಡಿವೈಡರ್‌ಗೆ ಬಸ್ ಡಿಕ್ಕಿ

0

ನೆಲ್ಯಾಡಿ: ರಾ.ಹೆ.75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಜೂ.22ರಂದು ಬೆಳಿಗ್ಗೆ ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್‌ನ ಮುಂಭಾಗ ಜಖಂಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

LEAVE A REPLY

Please enter your comment!
Please enter your name here