ರಾಮಕುಂಜೇಶ್ವರ ಪ.ಪೂ.ಕಾಲೇಜು, ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

0

ರಾಮಕುಂಜ: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನದ ಆಚರಣೆಯನ್ನ ಮಾಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿದ್ದ ವೆಲ್ನೆಸ್ ಹೆಲ್ತ್ ಸೆಂಟರ್ ಉಪ್ಪಿನಂಗಡಿ ಇದರ ವೈದ್ಯರಾದ ಡಾ.ಹರ್ಷಿತರವರು ಮಾತನಾಡಿ, ಯೋಗದ ಅಭ್ಯಾಸವು ಮಾನವನಲ್ಲಿ ಗುಣಾತ್ಮಕ ಬದಲಾವಣೆಗಳನ್ನು ತರುತ್ತದೆ. ಪ್ರತಿನಿತ್ಯ ಯೋಗ ಅಭ್ಯಾಸವನ್ನು ಮಾಡುವುದರಿಂದ ವ್ಯಕ್ತಿಯು ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಗಟ್ಟಿಯಾಗುತ್ತಾ ಹೋಗುತ್ತಾನೆ. ಈ ತರದ ಬದಲಾವಣೆಯಿಂದ ಒಬ್ಬ ವ್ಯಕ್ತಿ ಅಥವಾ ವಿದ್ಯಾರ್ಥಿ ಸಮಾಜದಲ್ಲಿ ಬರುವಂತಹ ಅನೇಕ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುತ್ತಾನೆ. ಇದಕ್ಕೆ ಅನೇಕ ನಿದರ್ಶನಗಳು ಕೂಡ ನಮ್ಮ ಕಣ್ಣ ಮುಂದೆಯೇ ಇದೆ. ಹಾಗಾಗಿ ಎಲ್ಲರೂ ಕೂಡ ನಿತ್ಯ ಯೋಗದ ಅಭ್ಯಾಸವನ್ನು ಮಾಡಿ ಅದರ ಪ್ರಯೋಜನವನ್ನ ಪಡೆದುಕೊಳ್ಳಬೇಕು ಎಂದು ಹೇಳಿದರು. ಬಳಿಕ ದಿನನಿತ್ಯ ಮಾಡಬೇಕಾದ ಕೆಲವು ಆಸನಗಳನ್ನು ಪ್ರಾಣಾಯಾಮಗಳನ್ನ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷತೆಯ ಮೂಲಕ ಕಲಿಸಲಾಯಿತು. ಈ ಸಂದರ್ಭದಲ್ಲಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗಣೇಶ್ ಇವರು ಸಹಕರಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ, ಮುಖ್ಯಗುರು ಸತೀಶ್ ಭಟ್, ಉಪನ್ಯಾಸಕರು, ಅಧ್ಯಾಪಕರು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here