ಕೊಯಿಲ ಬಡಗನ್ನೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪುತ್ತೂರು: ಬಡಗನ್ನೂರು ಗ್ರಾಮದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕೊಯಿಲ ಬಡಗನ್ನೂರು ಇಲ್ಲಿ ‘ವಸುಧೈವ ಕುಟುಂಬಕಂ’ ಧ್ಯೇಯ ವಾಕ್ಯದೊಂದಿಗೆ ಮಾನವೀಯತೆಗಾಗಿ ಯೋಗ ಶೀರ್ಷಿಕೆಯಡಿಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಂದರ ಟಿ ಕಾರ್ಯಕ್ರಮಕ್ಕೆ ಶುಭಕೋರಿದರು. ಮುಖ್ಯೋಪಾಧ್ಯಾಯರಾದ ಪುಷ್ಪಾವತಿ ಎಂ ಬಿ ಯೋಗದ ಮಹತ್ವ ಮತ್ತು ಅಗತ್ಯತೆ ಬಗ್ಗೆ ಮಾತನಾಡಿ ಪ್ರತಿಜ್ಞಾ ವಿಧಿ ಬೋಧಿಸಿದರು. ಸಹಶಿಕ್ಷಕ ಗಿರೀಶ್ ಮಾರ್ಗದರ್ಶನದಲ್ಲಿ ಶಿಥಿಲೀಕರಣ ವ್ಯಾಯಾಮ ,ಆಸನಗಳು,ಪ್ರಾಣಾಯಾಮ, ಧ್ಯಾನ ವನ್ನು ಅಭ್ಯಾಸ ಮಾಡಲಾಯಿತು. ಎಲ್ಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು. ಅತಿಥಿ ಶಿಕ್ಷಕಿ ಸರಳ , ಮತ್ತು ಗೌರವ ಶಿಕ್ಷಕಿ ಪೂರ್ಣಿಮಾ ಸಹಕರಿಸಿದರು.

LEAVE A REPLY

Please enter your comment!
Please enter your name here