ಉಪ್ಪಿನಂಗಡಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.



ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿಯವರು ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ಎಮ್ ಮಾತನಾಡಿ, ಆರೋಗ್ಯವಂತ ಜನತೆಯು ದೇಶದ ಶಕ್ತಿಯಾಗಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಈ ದಿನ ಯೋಗಾ ದಿನವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಉತ್ತಮ ಆಹಾರದ ಜೊತೆಗೆ ದೇಹ ದಂಡನೆಯ ಮೂಲಕ ನಮ್ಮ ಆರೋಗ್ಯವನ್ನು ಸದೃಢಗೊಳಿಸುವ ಬಗ್ಗೆ ಮಕ್ಕಳಿಗೆ ತಿಳಿಸಿದರು. ಶಿಕ್ಷಕರಾದ ಸುಮನಾ, ದಿವ್ಯ, ವೆಂಕಟರಮಣ ಭಟ್, ಶಾಲಾ ಗೌರವ ಶಿಕ್ಷಕ ಜುನೈದ್, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.