ನೆಲ್ಯಾಡಿ: ಉಪ್ಪಿನಂಗಡಿ ವಲಯದ ಶೌರ್ಯ ವಿಪತ್ತು ತಂಡದಿಂದ ವಾರ್ಷಿಕೋತ್ಸವದ ಸವಿನೆನಪಿಗಾಗಿ ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಔಷಧಿ ಗಿಡಗಳ ನಾಟಿ ಮಾಡಲಾಯಿತು.
ಉಪ್ಪಿನಂಗಡಿ ವಲಯದ ಮೇಲ್ವಿಚಾರಕ ಶಿವಪ್ಪ ಎಂ.ಕೆ. ಅವರು ಮಾಹಿತಿ ಮಾರ್ಗದರ್ಶನ ನೀಡಿದರು. ಔಷಧಿ ಗಿಡಗಳನ್ನು ಗ್ರಾಮ ವಿಕಾಸ ಯೋಜನೆ ಹಾಗೂ ಉಪ್ಪಿನಂಗಡಿ ಶ್ರೀರಾಮ ಶಾಲೆಯವರು ನೀಡಿ ಸಹಕರಿಸಿದರು. ಮುದ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸೋಮಸುಂದರ ಕೊಡಿಪಾನ ಉಪಸ್ಥಿತರಿದ್ದರು. ವಲಯದ ಅಧ್ಯಕ್ಷ ನಾರಾಯಣ ಕೆಳಗಿನಮನೆ, ಶ್ರೀರಾಮ ಶಾಲೆ ಆಡಳಿತ ಮಂಡಳಿಯ ಸದಸ್ಯ ಗಣೇಶ್ ಕುಲಾಲ್, ಒಕ್ಕೂಟದ ಮಾಜಿ ಅಧ್ಯಕ್ಷ ಧನಂಜಯ ಬೆದ್ರೋಡಿ, ಘಟಕದ ಪ್ರತಿನಿಧಿ ಸದಾನಂದ ಶಿಬಾರ್ಲ, ಘಟಕದ ಸಂಯೋಜಕಿ ಮಮತ ಮತ್ತು ವಿಪತ್ತು ತಂಡದ ಸದಸ್ಯರು ಭಾಗವಹಿಸಿದ್ದರು.