ಜೂ.25:ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಕ್ರೀಡಾಕೂಟ

0

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ದರ್ಬೆ ಫಿಲೋನಗರದ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವದ ಅಂಗವಾಗಿ ವಾರ್ಷಿಕ ಕ್ರೀಡಾಕೂಟವನ್ನು ಜೂ.25 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.


ಉದ್ಘಾಟನೆಯನ್ನು ಸಂತ ಫಿಲೋಮಿನಾ ಕಾಲೇಜಿನ ಪೋಷಕರಾದ ಸತೀಶ್ ನಾಯ್ಕ್ ರವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾದ ವಂ|ಡಾ| ಆಂಟನಿ ಪ್ರಕಾಶ್ ಮೊಂತೇರೊರವರು ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಯಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈರವರು ಭಾಗವಹಿಸಲಿದ್ದಾರೆ.


ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಪುರುಷರಿಗೆ ಕ್ರಿಕೆಟ್ ಹಾಗೂ ವಾಲಿಬಾಲ್ ಮತ್ತು ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟವನ್ನು ಆಯೋಜಿಸಲಾಗಿದೆ. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಹಾಗೂ ಹೆಚ್ಚಿನ ಮಾಹಿತಿಗೆ ಎ.ಜೆ ರೈ, ಅಧ್ಯಕ್ಷರು(9483944754), ಹಿರಿಯ ವಿದ್ಯಾರ್ಥಿ ಸಂಘ, ಕೃಷ್ಣಪ್ರಸಾದ್ ಆಳ್ವ, ಉಪಾಧ್ಯಕ್ಷರು(9591889368), ರಕ್ಷಕ-ಶಿಕ್ಷಕ ಸಂಘ, ಪ್ರಶಾಂತ್ ರೈ, ಕಾರ್ಯದರ್ಶಿ(9449269166), ರಕ್ಷಕ-ಶಿಕ್ಷಕ ಸಂಘ, ಎಲ್ಯಾಸ್ ಪಿಂಟೋ(9448549616), ದೈಹಿಕ ಶಿಕ್ಷಣ ನಿರ್ದೇಶಕರು ಸಂಪರ್ಕಿಸಬಹುದು ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here