ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಒಳಗಾದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡ ಗ್ರಾಮಾಂತರ ಠಾಣೆ ಪಿಎಸ್‌ಐ ಶ್ರೀನಾಥ್ ರೆಡ್ಡಿ, ಪುತ್ತೂರು ಗ್ರಾಮಾಂತರ ಠಾಣೆಯ ಪಿಸಿ ಹರ್ಷಿತ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.
ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀನಾಥ್ ರೆಡ್ಡಿಯವರನ್ನು ಹೊರ ಜಿಲ್ಲೆಗೆ ವರ್ಗಾಯಿಸಲಾಗಿತ್ತು. ಅದರಂತೆ ಅವರು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಾನ್‌ಸ್ಟೇಬಲ್ ಹರ್ಷಿತ್ ಅವರಿಗೆ ಸೆನ್ ವಿಭಾಗಕ್ಕೆ ವರ್ಗಾಯಿಸಲಾಗಿತ್ತಾದರೂ ಅವರು ಕರ್ತವ್ಯಕ್ಕೆ ಹಾಜರಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ವಿವರ:
ದೌರ್ಜನ್ಯಕ್ಕೊಳಗಾದ ಯುವಕ ಅವಿನಾಶ್ ತಂದೆ ವೇಣುನಾಥ ನರಿಮೊಗರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಡಿ ವೈ ಎಸ್ ಪಿ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್‌ಐ ಶ್ರೀನಾಥ್ ರೆಡ್ಡಿ, ಪುತ್ತೂರು ಗ್ರಾಮಾಂತರ ಠಾಣೆಯ ಪಿಸಿ ಹರ್ಷಿತ್ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಅಡಿ no.39/23 u/s 323,324,506 r/w 34IPC ಸೆಕ್ಷನ್ ಪ್ರಕಾರ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿ ಗೆ ವಹಿಸಲಾಗಿತ್ತು. ಈ ನಡುವೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿಯಂತೆ ಇಲಾಖೆ ವಿಚಾರಣೆ ಕಾಯ್ದಿರಿಸಿ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್‌ಐ ಹಾಗೂ ಪಿಸಿ ಹರ್ಷಿತ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಪುತ್ತೂರು ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ್ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಗೊಳ್ಳುವ ನಿಟ್ಟಿನಲ್ಲಿ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು. ಜೂ. 16ರಂದು ಡಾ. ವೀರಯ್ಯ ಹಿರೇಮಠ್ ಅವರು ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಇದೀಗ ಪಿಎಸ್‌ಐ ಮತ್ತು ಪಿಸಿಗೆ ವರ್ಗಾವಣೆಯಾಗಿದೆ.