ವಿಟ್ಲ: ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಕಛೇರಿಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾಶಂಕರಿ ಬಲಿಪಗುಳಿ ರವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.ಪುತ್ತೂರಿನ ಆಯುಷ್ ಡಾಕ್ಟರ್ ಅಮೃತ ರವರು ಯೋಗಾಸನ ಮಾಡುವುದರರೊಂದಿಗೆ ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳು ,ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಪಂಚಾಯತ್ ಸದಸ್ಯರು ಮತ್ತು ಪಂಚಾಯತ್ ಸಿಬ್ಬಂದಿಗಳು ಬಾಗವಹಿಸಿದ್ದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಶೈಲ ಢೋಣುರ ರವರು ಸ್ವಾಗತಿಸಿ ವಂದಿಸಿದರು.