ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಜೂ.21 ರಂದು ಇರ್ದೆ ಉಪ್ಪಳಿಗೆ ಸರಕಾರಿ ಪ್ರೌಡಶಾಲೆಯಲ್ಲಿ ನಡೆಯಿತು.ಪ್ರೌಡಶಾಲೆಯ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ತಾಲೂಕು ಕೃಷಿ ಅಧಿಕಾರಿ ಉಮೇಶ್ ಪರಿಸರ ಮಾಹಿತಿ ನೀಡುತ್ತಾ ಪರಿಸರ ಸ್ವಚ್ಚತೆ ಕಾಪಾಡುವ ಬಗ್ಗೆ ಸೂಕ್ತ ಮಾಹಿತಿ ನೀಡಿದರು.
ತಾಲೂಕು ಯೋಜನಾಧಿಕಾರಿ ಶಶಿಧರ್,ಪ್ರೌಡಶಾಲಾ ಹಿರಿಯ ಶಿಕ್ಷಕ ರಾಮಚಂದ್ರ, ದೈಹಿಕ ಶಿಕ್ಷಣ ಶಿಕ್ಷಕ ರಾಮಕೃಷ್ಣ ಪಡುಮಲೆ,ಉಪ್ಪಳಿಗೆ ಒಕ್ಕೂಟದ ಅಧ್ಯಕ್ಷ ಹರೀಶ್ ಗೌಡ, ಅಜಲಡ್ಕ ಒಕ್ಕೂಟದ ಅಧ್ಯಕ್ಷ ಚನಿಯಪ್ಪ ನಾಯ್ಕ ಉಪಸ್ಥಿತರಿದ್ದರು.ಕರ್ನಾಟಕ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯೆ ಮೀನಾಕ್ಷಿ ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಸಹಶಿಕ್ಷಕಿ ಶ್ಯಾಮಲ ರೈ ಸ್ವಾಗತಿಸಿ ಸೇವಾ ಪ್ರತಿನಿಧಿ ಭಾರತಿ ಉಪ್ಪಳಿಗೆ ವಂದಿಸಿದರು. ವಲಯ ಮೆಲ್ವೀಚಾರಕ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗೂ ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡರು.