ಕೌಕ್ರಾಡಿ: ಗ್ರಾ.ಪಂ ಪಿಡಿಓ ಮಹೇಶ್‌ ಜಿ ಎನ್‌ ಲೋಕಾಯುಕ್ತ ಬಲೆಗೆ

0

ಪುತ್ತೂರು: ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು 20ರೂ ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಕೌಕ್ರಡಿ ಗ್ರಾಮ ಪಂಚಾಯತ್ ಪಿಡಿಒ‌ ಮಹೇಶ್,ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದಿದ್ದಾರೆ.‌


ಕೊಕ್ಕಡದ ನಿವಾಸಿ ವಸಂತ ರಾವ್‌ ಕೌಕ್ರಾಡಿ ಗ್ರಾಮದಲ್ಲಿ ಜಾಗದ 9/11 ಖಾತೆ ಬದಲಾವಣೆ ಮಾಡಿಕೊಡಲು 2017 ರಲ್ಲಿ ಕೌಕ್ರಾಡಿ ಗ್ರಾಮ ಪಂಚಾಯತ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆ ಆಗದೇ ಇದ್ದುದರಿಂದ 2021 ರಲ್ಲಿ ಮತ್ತೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿ ಮಾಡಿದ್ದರೂ ಖಾತೆ ಬದಲಾವಣೆ ಕೆಲಸ ಆಗಿರಲಿಲ್ಲ. ಕಳೆದ ಎರಡು ದಿನಗಳ ಹಿಂದೆ ಜೂನ್ 20 ರಂದು ವಿಚಾರಿಸಲು ಮತ್ತೆ ಗ್ರಾಮ ಪಂಚಾಯಿತಿಗೆ ಹೋಗಿದ್ದಾಗ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್ 20 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.ಈ ಕುರಿತು ಅರ್ಜಿದಾರರು ಲೋಕಾಯುಕ್ತರಿಗೆ ದೂರು ನೀಡಿದ್ದು ದೂರಿನ ಹಿನ್ನೆಲೆಯಲ್ಲಿ ಬಲೆ ಬೀಸಿದ ಲೋಕಾಯುಕ್ತ ಅಧಿಕಾರಿಗಳು ಜೂ 22 ರಂದು ಅರ್ಜಿದಾರರಿಂದ 20 ಸಾವಿರ ರೂ ಲಂಚ ಪಡೆಯುತ್ತಿರುವಾಗಲೇ ಪಿಡಿಒ ಅವರನ್ನು ರೆಡ್‌ ಹ್ಯಾಂಡ್‌ ಆಗಿ ಬಲೆಗೆ ಕೆಡವಿದ್ದಾರೆ. ಆರೋಪಿಯನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಉಪಾಧೀಕ್ಷಕರುಗಳಾದ ಶ್ರೀಮತಿ ಕಲಾವತಿ,ಚೆಲುವರಾಜು.ಬಿ.ಪೊಲೀಸ್ ನಿರೀಕ್ಷಕ ಅಮಾನುಲ್ಲ ಎ.ವಿನಾಯಕ ಬಿಲ್ಲವ,ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.ಬಂಧಿತ ಆರೋಪಿ ಪಿಡಿಓ ಮಹೇಶ್‌ ಜಿ ಎನ್‌ ಅವರನ್ನು ನ್ಯಾಯಾಲಕ್ಕೆ ಹಾಜರು ಪಡಿಸುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here