ಪುತ್ತೂರು: ಯೋಗವು ವಿಶ್ವಕ್ಕೆ ಭಾರತದ ಕೊಡುಗೆಯಾಗಿದೆ. ಯೋಗವನ್ನು ನಿರಂತರವಾಗಿ ಮಾಡುವುದರ ಮೂಲಕ ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಮುಂಡೂರು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು ತಿಳಿಸಿದರು.
ಅವರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಂಡೂರು ಇಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ನರಿಮೊಗರು ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಪರಮೇಶ್ವರಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು.ಯೋಗ ಪಟು ಶಾಲಾ ಸಹ ಶಿಕ್ಷಕ ರಾಮಚಂದ್ರಗೌಡ ಸಂದರ್ಭೋಜಚಿತವಾಗಿ ಮಾತನಾಡಿದರು. ಶಾಲಾ ಮುಖ್ಯಗುರು ವಿಜಯ ಪಿ ಅತಿಥಿಗಳನ್ನು ಯೋಗದ ಮಹತ್ವವನ್ನು ತಿಳಿಸಿ ಶುಭ ಕೋರಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಬಿ ವನಿತಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಶಶಿಕಲಾ ಟಿ ವಂದಿಸಿದರು.ಬಳಿಕ ಯೋಗ ಗುರು ಶ್ರೀರಾಮಚಂದ್ರ ಅವರ ನೇತೃತ್ವದಲ್ಲಿ ಟಿಜಿಟಿ ಶಿಕ್ಷಕ ರವೀಂದ್ರ ಶಾಸ್ತ್ರಿಯವರ ಸಹಕಾರದೊಂದಿಗೆ ಪ್ರಾತ್ಯಕ್ಷಿಕೆಯ ಮೂಲಕ ಯೋಗಾಭ್ಯಾಸ ಮಾಡುವುದರ ಮೂಲಕ ಯೋಗದಿನವನ್ನು ಆಚರಿಸಲಾಯಿತು. ಶಿಕ್ಷಕ ವೃಂದದವರು ಸಹಕರಿಸಿದರು.