ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಟಾಪ್ ಟೆನ್ ನಲ್ಲಿ ಏಳನೇ ಸ್ಥಾನ
ಪುತ್ತೂರು: ಎರಡು ವರ್ಷಗಳ ಹಿಂದೆ ಲಯನ್ಸ್ ಕ್ಲಬ್ ಪುತ್ತೂರು ಕಾವು ಮಾರ್ಗದರ್ಶನದಲ್ಲಿ ಪ್ರಾರಂಭಗೊಂಡ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಐದು ವರ್ಷಗಳ ಕೆಳಗಿನ ಕ್ಲಬ್ ಗಳಲ್ಲಿ ಟಾಪ್ ಟೆನ್ ಪಟ್ಟಿಯಲ್ಲಿ ಏಳನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ವರ್ಷವಿಡೀ ಅತ್ಯುತ್ತಮ ಸಮಾಜಮುಖಿ ಕಾರ್ಯಕ್ರಮಗಳನ್ನು ಸಮಾಜಕ್ಕೆ ಪರಿಚಯಿಸಿದ್ದರಿಂದ ಈ ಪ್ರಶಸ್ತಿ ಲಭಿಸಲು ಕಾರಣವಾಗಿದೆ. ಸಕಲೇಶಪುರದಲ್ಲಿ ಜರಗಿದ 2022-23 ನೇ ಸಾಲಿನ ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ 317D ಅವಾರ್ಡ್ಸ್ ನೈಟ್ ‘ಕೃತಜ್ಞ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಲಯನ್ಸ್ ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಎಸ್.ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಜೊತೆಗೆ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ, ಕಾರ್ಯದರ್ಶಿ ಮೋಹನ್ ನಾಯಕ್ ಮತ್ತು ಕೋಶಾಧಿಕಾರಿ ರವಿಚಂದ್ರ ಆಚಾರ್ಯರವರಿಗೆ ವೈಯಕ್ತಿಕ ಸ್ಟಾರ್ ಪ್ರಶಸ್ತಿಯನ್ನು ಅಲ್ಲದೆ ಕ್ಲಬ್ ನ ಸ್ಥಾಪಕಾಧ್ಯಕ್ಷರೂ, ಪ್ರಸ್ತುತ ವಲಯಾಧ್ಯಕ್ಷರಾಗಿರುವ ಲ್ಯಾನ್ಸಿ ಮಸ್ಕರೇನ್ಹಸ್ ರವರು ಸಿಲ್ವರ್ ಅವಾರ್ಡ್ ನ್ನು ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿರವರು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಮಾಜಿ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ನಿಯೋಜಿತ ಅಧ್ಯಕ್ಷ ರವೀಂದ್ರ ಪೈ, ಹನೀಫ್ ಮುಂಡೂರು, ಭಾಸ್ಕರ್ ಸುವರ್ಣ ಉಪಸ್ಥಿತರಿದ್ದರು.