ಪುತ್ತೂರು: 2023-24ನೇ ಸಾಲಿನಲ್ಲಿ ಸರಕಾರಿ ವಕೀಲರ ಅಧೀನದಲ್ಲಿ ನಾಲ್ಕು ವರ್ಷಗಳ ಅವಧೀಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲಿಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ ಮತ್ತು 3ಬಿ ಗೆ ಸೇರಿದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿಯವರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರೋಡ್, ಬಿಜೈ-ಕಾಪಿಕಾಡ್, ಮಂಗಳೂರು ಇಲ್ಲಿಂದ ಪಡೆದುಕೊಳ್ಳಬಹುದು.
ಅರ್ಜಿಯೊಂದಿಗೆ ವರ್ಗಾವಣೆ ಪ್ರಮಾಣ ಪತ್ರದ ಪ್ರತಿ, ಪದವಿ/ಕಾನೂನು ಪದವಿಯ ಅಂಕ ಪಟ್ಟಿಗಳು, ಬಾರ್ ಕೌನ್ಸಿಲ್ಸ್‌ನಲ್ಲಿ ನೋಂದಾಯಿತರಾಗಿರುವ ಬಗ್ಗೆ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ ಮತ್ತು ಇತ್ತೀಚಿನ ಎರಡು ಭಾವಚಿತ್ರ (ಪಾಸ್‌ಪೋರ್ಟ್ ಸೈಜ್)ಗಳನ್ನು ಲಗತ್ತಿಸಬೇಕು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಜು. 5 ರ ಒಳಗಾಗಿ ಈ ಮೇಲಿನ ಕಛೇರಿಗೆ ಸಲ್ಲಿಸಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.