ಜೂ.24: ಸಂತ ಫಿಲೋಮಿನಾ ಕ್ಯಾಂಪಸ್‌ಗೆ ಬಿಷಪ್ ಭೇಟಿ

0

ಪುತ್ತೂರು : ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ, ಕ್ಯಾಥೊಲಿಕ್ ಶಿಕ್ಷಣಸಂಸ್ಥೆಗಳ ಅಧ್ಯಕ್ಷ ಡಾ| ಪೀಟರ್ ಪೌಲ್ ಸಲ್ದಾನ ರವರು ಜೂ.24ರಂದು ಪುತ್ತೂರಿಗೆ ಭೇಟಿ ನೀಡಲಿದ್ದಾರೆ.

ತಮ್ಮ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಬಿಷಪ್‌ರವರ ಅಧಿಕೃತ ಭೇಟಿಯಾಗಿದೆ. ಅವರು ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಸಂತ ಫಿಲೋಮಿನಾ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲಿದ್ದು ನಂತರ ಈ ಶಿಕ್ಷಣಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳನ್ನು ಭೇಟಿಯಾಗಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here