ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ದಿನಾಚರಣೆ

0

ಯೋಗ ಎಂದರೆ ಬರೀ ಯೋಗಾಸನ ಅಲ್ಲ: ವಿನುತಾ ಎಂ ಸಾಲೆ
ಪುತ್ತೂರು: ಯೋಗ ಎಂದರೆ ಯೋಗಾಸನವಷ್ಟೇ ಅಲ್ಲ, ಅದು ಮನಸ್ಸು ಶರೀರ ಮತ್ತು ಆತ್ಮವನ್ನು ಒಂದುಗೂಡಿಸುವ ಸಾಧನೆ. ಯೋಗವು ಯಮ, ನಿಯಮ, ಆಹಾರ, ಪ್ರಾಣಾಯಮ, ಪ್ರತ್ಯಾಹಾರ, ಧ್ಯಾನ, ಧಾರಣ ಮತ್ತು ಸಮಾಧಿ ಸ್ಥಿತಿಯನ್ನು ಒಳಗೊಂಡಿದೆ. ಮಹರ್ಷಿ ಪತಂಜಲಿಯವರು ತಮ್ಮ ಅಷ್ಟಾಂಗ ಯೋಗದಲ್ಲಿ ಈ ಸಂಗತಿಗಳನ್ನು ವಿವರಿಸುತ್ತಾರೆ. ವಿದ್ಯಾರ್ಥಿಗಳೆಲ್ಲರೂ ಇವುಗಳನ್ನು ಅಳವಡಿಸಿಕೊಳ್ಳುವುದು ಅವಶ್ಯವಾಗಿದೆ ಎಂದು ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ರಸಾಯನಶಾಸ್ತ್ರ ಉಪನ್ಯಾಸಕಿ ವಿನುತಾ ಎಂ ಸಾಲೆ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಬುಧವಾರ ಆಯೋಜಸಲಾದ ವಿಶ್ವಯೋಗ ದಿನಾಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳ ಏಕಾಗ್ರತೆ ಮತ್ತು ಬುದ್ಧಿಮತ್ತೆಯನ್ನು ಹೆಚ್ಚಿಸಲು ತುಂಬಾ ಸಹಾಯಕವಾಗುವ ’ಸೂಪರ್ ಬ್ರೈನ್’ ಆಸನವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲೆ ಸುಚಿತ್ರಾ ಪ್ರಭು ಹಾಗೂ ಉಪಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಉಪನ್ಯಾಸಕಿ ಅಪರ್ಣಾ ಎಸ್ ಉಪಾಧ್ಯಾಯ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here