ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಹಾಗು ಶಿಕ್ಷಣ ಸಂಸ್ಥೆಗಳಿಗೆ ಬಿಷಪ್ ಆಧಿಕೃತ ಭೇಟಿ.

0

ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗು ಕಥೋಲಿಕ್ ವಿದ್ಯಾಸಂಸ್ಥೆಗಳ ಆಧ್ಯಕ್ಷರಾದ ಪರಮ ಪೂಜ್ಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ರವರು ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಹಾಗು ಮಾಯ್ ದೆ ದೇವುಸ್ ಶಿಕ್ಷಣ ಸಂಸ್ಥೆಗಳಿಗೆ ಜೂನ್ 24 ಮತ್ತು 25 ರಂದು ತಮ್ಮ ಆಧಿಕೃತ ಭೇಟಿಯನ್ನು ನೀಡಲಿದ್ದಾರೆ.

ಜೂನ್ 24 ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಇಲ್ಲಿ ಆಗಮಿಸಿ ಪ್ರಾರ್ಥನಾ ವಿಧಿಗಳನ್ನು ನೆರವೇರಿಸಿ ತದನಂತರ ಮಾಯ್ ದೆ ದೇವುಸ್ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ.

ಮಾಯ್ ದೆ ದೇವುಸ್ ಚರ್ಚ್ ವಠಾರದಲ್ಲಿರುವ ಸಂತ ವಿಕ್ಟರ್ ಬಾಲಿಕಾ ಪ್ರೌಡ ಶಾಲೆ, ಮಾಯ್ ದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆ, ಸಂತ ವಿಕ್ಟರ್ ಆಂಗ್ಲಮಾದ್ಯಮ ಶಾಲೆ ಹಾಗು ಸಂತ ಫಿಲೋಮಿನಾ ಕ್ಯಾಂಪಸ್‌ನಲ್ಲಿರುವ ಸಂತ ಫಿಲೋಮಿನಾ ಆಂಗ್ಲ ಮಾದ್ಯಮ ಶಾಲೆ, ಸಂತ ಫಿಲೋಮಿನಾ ಪ್ರೌಡ ಶಾಲೆ, ಸಂತ ಫಿಲೋಮಿನಾ ಪಿ.ಯು ಕಾಲೇಜು, ಸಂತ ಫಿಲೋಮಿನಾ ಕಾಲೇಜಿಗೆ ಭೇಟಿ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಂತ ಫಿಲೋಮಿನಾ ವಿದ್ಯಾರ್ಥಿ ಹಾಗು ವಿದ್ಯಾರ್ಥಿನಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಶನಿವಾರ ಸಂಜೆ ಮಾಯ್ ದೆ ದೇವುಸ್ ಚರ್ಚ್ ಇಲ್ಲಿ ದಿವ್ಯಬಲಿಪೂಜೆಯನ್ನು ಆರ್ಪಿಸಿ ದೃಢೀಕರಣ ಸಂಸ್ಕಾರವನ್ನು ನೀಡಲಿದ್ದಾರೆ. ಜೂನ್ 25 ರಂದು ಭಾನುವಾರ ದಿವ್ಯಬಲಿಪೂಜೆಯನ್ನು ಆರ್ಪಿಸಿ ಚರ್ಚಿನ ಪಾಲನಾ ಮಂಡಳಿ ಹಾಗು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜೊತೆಗೆ ಸಂವಾದ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here