ಕಡಬ: ಮನೆಯೊಂದರಲ್ಲಿ ವಾಸವಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಆಕೆಯ ಸಹೋದರ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಡಬ ಗ್ರಾಮದ ಕಳಾರ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ರಕ್ಷಿತಾ (18) ನಾಪತ್ತೆಯಾದ ಯುವತಿ.
ಹಾಸನ ಜಿಲ್ಲೆ ಬೇಲೂರು ತಾಲೂಕು ಹಗರೆ ಅಂಗಡಿಹಳ್ಳಿಯ ಕುಟುಂಬ ಕಳೆದ 6 ವರ್ಷಗಳಿಂದ ಕಳಾರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಾಣೆಯಾದ ಯುವತಿ 10ನೇ ತರಗತಿ ವಿದ್ಯಾಬ್ಯಾಸ ಮಾಡಿ ಬಳಿಕ ಮೂರು ವರ್ಷದಿಂದ ಮನೆಯಲ್ಲಿಯೇ ಇದ್ದಳು.
ಜೂ.20ರಂದು ಬೆಳಗ್ಗೆ ಮನೆಯಿಂದ ಹೊರಗೆ ಹೋದವಳು ಇದುವರೆಗೆ ಮನೆಗೆ ಬಾರದೇ, ಬೇಲೂರು ತಾಲೂಕಿನ ಹಗರೆ ಎಂಬಲ್ಲಿಗೂ ಹೋಗದೆ ನಾಪತ್ತೆಯಾಗಿದ್ದಾಳೆ. ಈಕೆಯ ಸಂಬಂಧಿಕರೋರ್ವನನ್ನು ಪ್ರೀತಿಸುತ್ತಿದ್ದು ಆತನ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು ಯಾವುದೇ ಮಾಹಿತಿ ಪತ್ತೆ ಸಾಧ್ಯವಾಗಿಲ್ಲ ಎಂದು ಯುವತಿಯ ಸಹೋದರ ಸುನಿಲ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.