





ವಿಟ್ಲ: ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಜು.9ರಿಂದ ಆ.25ರ ವರೆಗೆ ನಡೆಯಲಿರುವ ಬೆಳ್ಳಿಹಬ್ಬ ಮಹೋತ್ಸವದ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಹಿನ್ನೆಲೆಯಲ್ಲಿ ಜೂ.25ರಂದು ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.










