ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಬೀಜ ಬಿತ್ತನೆಗೆ ಚಾಲನೆ- ಟ್ರಾಕ್ಟರ್ ಚಲಾಯಿಸಿದ ಶಾಸಕ ಅಶೋಕ್ ಕುಮಾರ್ ರೈ

0

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಬೀಜ ಬಿತ್ತನೆಗೆ ಜೂ.25 ರಂದು ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈಯವರು ಟ್ರಾಕ್ಟರ್‌ನಲ್ಲಿ ಚಲಾಯಿಸಿ, ಗದ್ದೆ ಉಳುಮೆ ಮಾಡಿದರು. ನಂತರ ಬೀಜ ಬಿತ್ತುವ ಮೂಲಕ ಚಾಲನೆ ನೀಡಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯರಾದ ಶೇಖರ್ ನಾರಾವಿ, ರಾಮದಾಸ ಗೌಡ, ರವೀಂದ್ರನಾಥ ರೈ, ರಾಮಚಂದ್ರ ಕಾಮತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸುದೇಶ್ ಚಿಕ್ಕಪುತ್ತೂರು, ಕೋಡಿಂಬಾಡಿ ಗ್ರಾ.ಪಂ ಸದಸ್ಯ ಜಯಪ್ರಕಾಶ್ ಬದಿನಾರು, ವಿನಯ ಸವಣೂರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here