ಶಾಸಕ ಅಶೋಕ್ ಕುಮಾರ್ ರೈಯವರಿಗೆ ಮಹಾಲಿಂಗೇಶ್ವರ ದೇವಸ್ಥಾನದಿಂದ ಸನ್ಮಾನ

0

ಪುತ್ತೂರು:ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜೂ.25ರಂದು ನಡೆದ ಗದ್ದೆಯ ಬೀಜ ಬಿತ್ತನೆ ಹಾಗೂ ಅಭಿವೃದ್ಧಿ ಸಮಿತಿ ಸಭೆಗೆ ಆಗಮಿಸಿದ ಶಾಸಕ ಅಶೋಕ್ ಕುಮಾರ್ ರೈಯವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.


ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಸನ್ಮಾನಿಸಿ ಗೌರವಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ರಾಮದಾಸ ಗೌಡ, ರವೀಂದ್ರನಾಥ ರೈ, ರಾಮಚಂದ್ರ ಕಾಮತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ರವೀಂದ್ರ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here