ಜೂ.27:ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ, ರಕ್ಷಕ-ಶಿಕ್ಷಕ ಸಂಘದ ವಾರ್ಷಿಕೋತ್ಸವ

0

ಪುತ್ತೂರು:ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ದರ್ಬೆ ಫಿಲೋನಗರ ದ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕೋತ್ಸವವು ಜೂ.27 ರಂದು ಕಾಲೇಜಿನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ಸಂಜೆ ಜರಗಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|ಲಾರೆನ್ಸ್ ಮಸ್ಕರೇನ್ಹಸ್ ರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಇಂಡಿಯನ್ ಆರ್ಮಿಯ ಮೇಜರ್ ಜನರಲ್ ಎಂ.ವಿ ಭಟ್, ಬೆಂಗಳೂರು ಸಿಟಿ ಪೊಲೀಸ್ ‘ಪರಿಹಾರ್’ ಇದರ ಇನ್ ಚಾರ್ಜ್ ಶ್ರೀಮತಿ ರಾಣಿ ಶೆಟ್ಟಿ, ಸಂತ ಫಿಲೋಮಿನಾ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಮಾಜಿ ಅಧ್ಯಕ್ಷ ಪುರಂದರ ರೈ ಮಿತ್ರಂಪಾಡಿ, ಗೌರವ ಉಪಸ್ಥಿತಿಯಾಗಿ ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾ, ಸಂತ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋ, ಸಂತ ಫಿಲೋಮಿನಾ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ|ಗಣೇಶ್ ಭಟ್ ಕೆ. ಹಾಗೂ ಡಾ.ಎ.ಪಿ ರಾಧಾಕೃಷ್ಣರವರು ಭಾಗವಹಿಸಲಿರುವರು.


ಈ ಸಂದರ್ಭದಲ್ಲಿ ಕಾಲೇಜಿನ ನಿವೃತ್ತ ಸಿಬ್ಬಂದಿಗಳನ್ನು, ರ್ಯಾಂಕ್ ವಿಜೇತರನ್ನು, ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ. ವಾರ್ಷಿಕೋತ್ಸವದ ಮುನ್ನ ವಾರ್ಷಿಕ ಮಹಾಸಭೆ ನಡೆಯಲಿದೆ. ಕಾಲೇಜಿನ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರುಗಳು ವಾರ್ಷಿಕೋತ್ಸವದಲ್ಲಿ ಭಾಗವಹಿಸುವಂತೆ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ.ಜೆ ರೈ, ಕಾರ್ಯದರ್ಶಿ ತೇಜಸ್ವಿ ಭಟ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಕಾರ್ಯದರ್ಶಿ ಪ್ರಶಾಂತ್ ರೈರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here