ಪುತ್ತೂರು: ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿ ಮತ್ತು ಮಹಿಳಾ ವೇದಿಕೆಯ ಮಹಾಸಭೆ, ಪದಾಧಿಕಾರಿಗಳ ಆಯ್ಕೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಕೋಡಿಂಬಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷ ಗ್ರಾ.ಪಂ. ಸದಸ್ಯ ಜಯಪ್ರಕಾಶ್ ಬದಿನಾರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಪುತ್ತೂರು ಬಿಲ್ಲವ ಸಂಘದ ಕಾರ್ಯದರ್ಶಿ ಚಿದಾನಂದ ಸುವರ್ಣ ಉದ್ಘಾಟಿಸಿದರು. ಮುಖ್ಯ ಅಭ್ಯಾಗತರಾಗಿ ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ.ಟಿ. ಮಹೇಶ್ಚಂದ್ರ ಸಾಲಿಯಾನ್, ಉಪಾಧ್ಯಕ್ಷೆ ಚಂದ್ರಕಲಾ ಮುಕ್ವೆ, ವಲಯ ಸಂಚಾಲಕ ನ್ಯಾಯವಾದಿ ಮನೋಹರ ಆರುವಾರ, ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಕಾರ್ಯ ನಿರ್ವಹಣಾಧಿಕಾರಿ ಹೊನ್ನಪ್ಪ ಪೂಜಾರಿ ಕೈಂದಾಡಿ, ಜಿ.ಪಂ.ಮಾಜಿ ಸದಸ್ಯೆ ಶಯನಾ ಜಯಾನಂದ, ಬಿಲ್ಲವ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ತಾ.ಪಂ. ಮಾಜಿ ಅಧ್ಯಕ್ಷ ಕೆ. ಜಯಾನಂದ, ಗ್ರಾ.ಪಂ ಉಪಾಧ್ಯಕ್ಷೆ ಉಷಾ ಲಕ್ಷ್ಮಣ ಪೂಜಾರಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ರೇವತಿ ವೀರಪ್ಪ ಪೂಜಾರಿ ಡೆಕ್ಕಾಜೆ, ಗೆಜ್ಜೆಗಿರಿ ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಆದರ್ಶ ವಿವಿದ್ಧೋದೇಶ ಸಹಕಾರ ಸಂಘದ ಮಾರಾಟಾಧಿಕಾರಿ ಶ್ರೀಧರ ಪೂಜಾರಿ ಕೆದಿಕಂಡೆ ಮತ್ತು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಕಬಕ ಶಾಖೆಯ ವ್ಯವಸ್ಥಾಪಕ ಈಶ್ವರ ಪೂಜಾರಿ ನಿಡ್ಯ ಭಾಗವಹಿಸಿದ್ದರು.
ಅಧ್ಯಕ್ಷತೆ ವಹಿಸಿದ್ದ ಜಯಪ್ರಕಾಶ್ ಬದಿನಾರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಸಮಿತಿಯ ಕಾರ್ಯದರ್ಶಿಯಾಗಿರುವ ಗ್ರಾ.ಪಂ. ಸದಸ್ಯೆ ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ ವಂದಿಸಿದರು. ಕೋಡಿಂಬಾಡಿ ಹಿ.ಪ್ರಾ. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಶೇಖರ ಪೂಜಾರಿ ನಿಡ್ಯ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಬಿಲ್ಲವ ಗ್ರಾಮ ಸಮಿತಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು. ಶೈಕ್ಷಣಿಕ ಕ್ಷೇತ್ರದ ಸಾಧಕರಾದ ದೃಶ್ಯ, ಅಂಶಿಕಾ, ರಿಷಿತಾ ಸಿ. ಸನಿಲ್ ಮತ್ತು ಶ್ರೇಯಾ ಡೆಕ್ಕಾಜೆರವರನ್ನು ಸನ್ಮಾನಿಸಲಾಯಿತು.
ಪದಾಧಿಕಾರಿಗಳ ಆಯ್ಕೆ: ಬಿಲ್ಲವ ಗ್ರಾಮ ಸಮಿತಿ ಮತ್ತು ಮಹಿಳಾ ವೇದಿಕೆಯ ಪದಾಧಿಕಾರಿಗಳನ್ನು ಸಭೆಯಲ್ಲಿ ಪುನರಾಯ್ಕೆ ಮಾಡಲಾಯಿತು. ಗ್ರಾಮ ಸಮಿತಿ ಗೌರವಾಧ್ಯಕ್ಷರಾಗಿ ತಾ.ಪಂ.ಮಾಜಿ ಅಧ್ಯಕ್ಷ ಕೆ.ಜಯಾನಂದ, ಅಧ್ಯಕ್ಷರಾಗಿ ಗ್ರಾ.ಪಂ.ಸದಸ್ಯ ಜಯಪ್ರಕಾಶ್ ಬದಿನಾರು,ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ ಕೆದಿಕಂಡೆ, ಕಾರ್ಯದರ್ಶಿಯಾಗಿ ಈಶ್ವರ ಪೂಜಾರಿ ನಿಡ್ಯ, ಕೋಶಾಧಿಕಾರಿಯಾಗಿ ವಿಜಯ ಕುಮಾರ್ ಚೀಮುಳ್ಳು, ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಪ್ರೇಮಲತಾ ದೇವದಾಸ್ ಡೆಕ್ಕಾಜೆ, ಕಾರ್ಯದರ್ಶಿಯಾಗಿ ಗ್ರಾ.ಪಂ. ಸದಸ್ಯೆ ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ, ಪದಾಧಿಕಾರಿಗಳಾಗಿ ರಮ್ಯ ಶಶಿಧರ ಡೆಕ್ಕಾಜೆ, ಹರಿಣಾಕ್ಷಿ ಶೇಖರ ಪೂಜಾರಿ ಡೆಕ್ಕಾಜೆ, ವಿನುತಾ ಜಯಪ್ರಕಾಶ್ ಬದಿನಾರು ಮತ್ತು ಪವಿತ್ರ ಪುನರಾಯ್ಕೆಗೊಂಡರು.