ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಘಟಕ, ಕರ್ನಾಟಕ ಪಶುವೈದ್ಯಕೀಯ ಇಲಾಖೆ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್, ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ನವತೇಜ ಪುತ್ತೂರು ಇದರ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ಜು.9ರಂದು ಹಲಸು ಹಬ್ಬವನ್ನು ಆಯೋಜಿಸಲಾಗಿದ್ದು, ಇದರ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ನಡೆದ ಆಮಂತ್ರಣ ಬಿಡುಗಡೆ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಜಯಂತ ಪೋರೊಳಿ, ಸುನಿಲ್ ಅನಾವು, ಉದ್ಯಮಿ ಸುಂದರ ಗೌಡ, ಜೇಸಿಐ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ, ಜೇಸಿಐ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಶೇಖರ ಗೌಂಡತ್ತಿಗೆ, ಜೇಸಿಐ ಪೂರ್ವಾಧ್ಯಕ್ಷರಾದ ಹರೀಶ್ ನಟ್ಟಿಬೈಲು, ಕೆ.ವಿ. ಕುಲಾಲ್ ಉಪಸ್ಥಿತರಿದ್ದರು. ಜು.9ರಂದು ಶ್ರೀ ಗುರು ಸುಧೀಂದ್ರ ಸಭಾಭವನದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಹಲಸಿನ ಹಬ್ಬ ನಡೆಯಲಿದೆ.