ನೇರ್ಲ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

0

ನೆಲ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ನೇರ್ಲ, ಇಚಿಲಂಪಾಡಿ ಶಾಲೆಯ ಮಕ್ಕಳಿಗೆ ಶಾಲೆಯ ಹಳೆ ವಿದ್ಯಾರ್ಥಿ ದೇವಿಪ್ರಸಾದ್ ಪೊಯ್ಯೆತ್ತಡ್ಡರವರು ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು.


ದೇವಿಪ್ರಸಾದ್‌ರವರು ಕಳೆದ ಕೆಲವು ವರ್ಷಗಳಿಂದ ತಮ್ಮ ಸ್ನೇಹಿತರ ಸಹಕಾರದೊಂದಿಗೆ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಉಚಿತ ಪುಸ್ತಕ ವಿತರಣೆ ಮಾಡುತ್ತಿದ್ದು, ಈ ವರ್ಷವೂ 6 ಮತ್ತು 7ನೇ ತರಗತಿಯ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾದೇವಿಪ್ರಸಾದ್, ಎಸ್‌ಡಿಎಂಸಿ ಅಧ್ಯಕ್ಷ ವಸಂತ ಬಿಜೇರು, ಶಾಲಾ ಮುಖ್ಯೋಪಾಧ್ಯಾಯನಿ ಜಯಶ್ರೀ ಎಸ್., ಶಿಕ್ಷಕರು, ಶಾಲಾ ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here