ಉಪ್ಪಿನಂಗಡಿ: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿಯ ವತಿಯಿಂದ ದಿನಾಂಕ ಜೂ.26 ರಂದು “ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಣೆ” ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್.ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣೆ ವಿರುದ್ಧ ಉಂಟಾಗುವ ಅಪಾಯ, ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ರಾಷ್ಟ್ರದ ಸಂಪತ್ತಾದ ಯುವ ಜನತೆ ವ್ಯಸನ ಮುಕ್ತರಾಗಿ ಸದೃಢ ಸಮಾಜ ನಿರ್ಮಾಣದಲ್ಲಿ ಸಹಭಾಗಿಗಳಾಗಬೇಕು ಎಂದು ಕರೆ ನೀಡಿದರು. ಮಾದಕ ದ್ರವ್ಯ ಸೇವನೆ ವ್ಯಾಪಾರ ಮತ್ತು ಸಾಗಾಣೆ ಶಿಕ್ಷಾರ್ಹ ಅಪರಾಧ ಎಂಬುದಾಗಿ ತಿಳಿ ಹೇಳಿದ ಅವರು ಆರೋಗ್ಯ ಪೂರ್ಣ ಸಮಾಜ ಕಟ್ಟುವಲ್ಲಿ ನಾವೆಲ್ಲಾ ಬದ್ಧರಾಗಬೇಕು ಎಂದು ಹೇಳಿದರು.
ಉಪ್ಪಿನಂಗಡಿಯ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಕೆ.ವಿ.ಯವರು ಉಪಸ್ಥಿತರಿದ್ದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಸುಬ್ಬಪ್ಪ ಕೈಕಂಬ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಅಹಮ್ಮದ್ ಎಸ್.ಎಂ ಸ್ವಾಗತಿಸಿದರು. ಡಾ. ಬಸವರಾಜೇಶ್ವರಿ ದಿಡ್ಡಿಮನಿಯವರು ವಂದಿಸಿದರು ಮತ್ತು ರಶ್ಮೀ ರಾವ್ .ಟಿ. ಕಾರ್ಯಕ್ರಮ ನಿರೂಪಣೆ ಮಾಡಿದರು.