ಅಕ್ರಮ ಮದ್ಯ ಮಾರಾಟ ಪ್ರಕರಣ ಆರೋಪಿಗೆ ನಿರೀಕ್ಷಣಾ ಜಾಮೀನು

0

ಪುತ್ತೂರು:ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಯೋರ್ವನಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಒಳಮೋಗ್ರು ಗ್ರಾಮದ ಕೈಕಾರ ಪನಡ್ಕ ಎಂಬಲ್ಲಿ ಪತ್ತೆಯಾಗಿದ್ದ ಅಕ್ರಮ ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿನೋದ್ ಕುಮಾರ್ ರೈಯವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯಿದೆಯನ್ವಯ ಪ್ರಕರಣ ದಾಖಲಿಲಾಗಿತ್ತು. ವಿಚಾರ ತಿಳಿದ ಆರೋಪಿಯು ನಿರೀಕ್ಷಣಾ ಜಾಮೀನು ಕೋರಿ ಅವರ ಪರ ವಕೀಲರಾದ ಮಹೇಶ್ ಕಜೆ ಅವರ ಮುಖಾಂತರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಶ್ರೀಮತಿ ಸರಿತಾ. ಡಿ.ರವರು ಅರ್ಜಿಯನ್ನು ಪುರಸ್ಕರಿಸಿ ಆರೋಪಿಗೆ ಶರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುತ್ತಾರೆ.

LEAVE A REPLY

Please enter your comment!
Please enter your name here