ಮಂಗಳೂರು ಸರಕಾರಿ ಪಾಲಿಟೆಕ್ನಿಕ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

0

ಮಂಗಳೂರು:ನಗರದ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್‌ನಲ್ಲಿ 2023-24ನೇ ಸಾಲಿನ ಅರೆಕಾಲಿಕ (ಪಾರ್ಟ್ ಟೈಮ್) ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಆಫ್‌-ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.

ಪರಿಷ್ಕೃತ ವೇಳಾ ಪಟ್ಟಿ ಇಂತಿದೆ: 2023ರ ಜುಲೈ 10ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. ಅಂತಿಮ ಮೆರಿಟ್ ಪಟ್ಟಿ ಪ್ರಕಟಣೆ ದಿನ ಜುಲೈ 12ರಂದು. ಸಂದರ್ಶನ ಮತ್ತು ಅಭ್ಯರ್ಥಿಗಳ ಆಯ್ಕೆ ದಿನ ಜುಲೈ 14 ಹಾಗೂ 15ರಂದು. ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಹಾಗೂ ಸಂಬಂಧಪಟ್ಟ ವಿಷಯದಲ್ಲಿ ಎರಡು ವರ್ಷಗಳ ತಾಂತ್ರಿಕ ಸೇವಾನುಭವ ಪಡೆದು ಖಾಯಂ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here