ವಿವೇಕಾನಂದ ಕಾಲೇಜಿನಲ್ಲಿ ʼವಿಧಿತ್ವ-2023ʼ ಉದ್ಘಾಟನೆ

0

ಸವಾಲುಗಳನ್ನು ಎದುರಿಸಿದರೆ ಯಶಸ್ಸುಖಂಡಿತ: ಕೃಷ್ಣಕುಮಾರ್ ಹೆಚ್‌ಎಮ್

ಪುತ್ತೂರು: ಕೌಶಲ್ಯ ಅಭಿವೃದ್ಧಿಗಳಂತಹ ಕಾರ್ಯಕ್ರಮಗಳು ಜೀವನದ ಮೌಲ್ಯವನ್ನು ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಗೊಳಿಸಲು ಸಹಾಯ ಮಾಡುತ್ತದೆ. ಪ್ರಸ್ತುತ ದಿನಗಳಲ್ಲಿ ಕೌಶಲ್ಯ ಒಂದು ಇದ್ರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು.ಇದು ಯಶಸ್ಸು ಪಡೆಯಲು ಇರುವ ಸುಲಭದ ಹಾದಿ ಎಂದು ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ್ ಹೆಚ್ ಎಂ ಹೇಳಿದರು.

ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ವಿಧಿತ್ವ-2023 ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಜ್ಞಾನ ಮತ್ತು ಅಭ್ಯಾಸದೊಳಗೆ ಜೀವನದ ಯಶಸ್ಸಿನ ಗುಟ್ಟು ಅಡಗಿದೆ. ಇದರೊಂದಿಗೆ ಹೊಸ ಹೊಸ ಅವಿಷ್ಕಾರಗಳನ್ನು ಮಾಡುತ್ತಲೇ ಇರಬೇಕು. ಹಾಗೆಯೇ ಮಾಡಿದಂತಹ ಪ್ರಯತ್ನಗಳು ನಿಷ್ಫಲವಾಗದಂತೆ ನೋಡಿಕೊಳ್ಳಬೇಕು. ಇದಕ್ಕೆ ಕೌಶಲ್ಯಾಭಿವೃದ್ಧಿಯಂತಹ ಕಾರ್ಯಕ್ರಮಗಳು ಅಗತ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಆಗಮಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷಗಣಪತಿ ಭಟ್ ಮಾತನಾಡಿ, ವಿದ್ಯಾರ್ಥಿಗಳು ಯಾವತ್ತೂ ತಮ್ಮ ಪ್ರತಿಭೆಗಳನ್ನು ಹೊರಹಾಕಲು ವೇದಿಕೆಗಳನ್ನು ಬಳಸಿಕೊಳ್ಳಬೇಕೇ ಹೊರತು ಪ್ರಶಸ್ತಿಗಾಗಿ ಅಲ್ಲ. ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ಸಹ ಪ್ರತಿಭೆಗಳನ್ನು ರೂಪಿಸುವ ಒಂದು ಉತ್ತಮ ವೇದಿಕೆ. ಇದನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಸ್ನಾತಕೋತ್ತರ ವಿಭಾಗದ ಡೀನ್, ಎಂ ಕಾಂ ವಿಭಾಗದ ಮುಖ್ಯಸ್ಥೆ ಡಾ.ವಿಜಯ ಸರಸ್ವತಿ ಬಿ, ಪರೀಕ್ಷಾಂಗ ಕುಲಸಚಿವ ಡಾ.ಹೆಚ್.ಜಿ. ಶ್ರೀಧರ್, ಕಾಲೇಜಿನ ವಿಶೇಷ ಅಧಿಕಾರಿ ಡಾ. ಶ್ರೀಧರ್ ನಾಯ್ಕ್ ಉಪಸ್ಥಿತರಿದ್ದರು. ಎಂಕಾಂ ವಿದ್ಯಾರ್ಥಿಅಕ್ಷಿತಾ ಸ್ವಾಗತಿಸಿ, ಜಗತ್ ವಂದಿಸಿದರು. ವಿದ್ಯಾರ್ಥಿನಿಯರಾದ ಅನನ್ಯ, ಶರಣ್ಯ, ಮೈತ್ರಿ ಪ್ರಾರ್ಥಿಸಿ, ವಿದ್ಯಾರ್ಥಿನಿಯರಾದ ವಿಭಾಶ್ರೀ ಭಟ್ ಹಾಗೂ ಲತಾಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here