ಪುತ್ತೂರು(ಜು.6): ಬೆಳ್ಳಾರೆಯಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ

0


ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಇದರ ಪ್ರಾಯೋಜಕತ್ವದಲ್ಲಿ ಪ್ರಾರಂಭಗೊಂಡಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು ಪುತ್ತೂರು, ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು, ಪುತ್ತೂರು ನಗರ, ಕಾಣಿಯೂರು ಶಾಖೆಗಳನ್ನು ಮಾಡಿ ಇದೀಗ 9ನೇ ಶಾಖೆಯು ಜು.6ರಂದು ಬೆಳ್ಳಾರೆಯ ಕಾತ್ಯಾಯಿನಿ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.


ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈಗಾಗಲೇ 8 ಶಾಖೆಗಳಲ್ಲಿ ಸುಮಾರು 7ಸಾವಿರಕ್ಕೂ ಹೆಚ್ಚಿನ ಸದಸ್ಯರನ್ನು ಹೊಂದಿದ್ದು, ಕಳೆದ ಅವಧಿಯಲ್ಲಿ 401 ಕೋಟಿಗಿಂತಲೂ ಮಿಕ್ಕಿ ವ್ಯವಹಾರಗಳನ್ನು ಮಾಡಿ ರೂ. 3.5 ಕೋಟಿಗಿಂಗ ಮಿಕ್ಕಿ ಪಾಲುಬಂಡಾವಳ ಹೊಂದಿದೆ. ಕಳೆದ ಅವಧಿಯಲ್ಲಿ ಸುಮಾರು ರೂ.1.50 ಕೋಟಿ ಲಾಭ ಪಡೆದುಕೊಂಡಿದೆ. ಕಾಣಿಯೂರಿನಲ್ಲಿ ಶಾಖೆ ಆರಂಭಗೊಂಡ ಒಂದು ವರ್ಷದೊಳಗೆ ಇನ್ನೊಂದು ಶಾಖೆ ತೆರೆಯಲಿದ್ದೇವೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಇದರ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸೇವ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ವಿಶ್ವನಾಥ ಗೌಡ ಕೆ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇದರ ಸಂಚಾಲಕ ಎಂ.ಪಿ.ಉಮೇಶ್, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್, ಪುತ್ತೂರು ಉಪವಿಭಾಗದ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ತ್ರಿವೇಣಿ ರಾವ್ ಕೆ, ಕಾತ್ಯಾಯಿನಿ ಕಾಂಪ್ಲೆಕ್ಸ್ ಮಾಲಕ ಬಿ ಪವನ್ ಶೆಣೈ ಉದ್ಘಾಟನೆ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ನಿರ್ದೇಶಕ ರಾಮಕೃಷ್ಣ ಕರ್ಮಲ, ಸತೀಶ್ ಪಾಂಬಾರು, ಲೋಕೇಶ್ ಚಾಕೋಟೆ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ ಉಪಸ್ಥಿತರಿದ್ದರು.
ಆಯಾ ಶಾಖೆಗಳಿಗೆ ನಿರ್ದೇಶಕರೇ ಸಲಹಾ ಸಮಿತಿ ಅಧ್ಯಕ್ಷರು. 2002ರಲ್ಲಿ ಡಿ.ವಿ.ಸದಾನಂದ ಗೌಡರ ಮಾರ್ಗದರ್ಶನದಲ್ಲಿ ಇಡ್ಯಡ್ಕ ಮೋಹನ್ ಗೌಡರ ನೇತೃತ್ವದಲ್ಲಿ ಸುಮಾರು 20 ಸಮಾನ ಮನಸ್ಕರ ತಂಡ ಪ್ರವರ್ತಕರಾಗಿ ಈ ಸಂಸ್ಥೆಯನ್ನು ಪ್ರಾರಂಭಿಸಿದ್ದರು. ಆಗ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ ದಿ. ಜಗನ್ನಾಥ ಬೊಮ್ಮೆಟ್ಟಿ, ಉಪಾಧ್ಯಕ್ಷರಾಗಿ ಜೆ.ಕೆ.ವಸಂತ ಗೌಡ ಸೇವೆ ಸಲ್ಲಿಸಿದ್ದರು. ನಂತರ ದಿನಗಳಲ್ಲಿ ಹಲವಾರು ಮಂದಿ ನಿರ್ದೇಶಕರಾಗಿ ಸೇವೆ ನೀಡಿದ್ದಾರೆ. ಸಂಘದ ಪ್ರಧಾನ ಕಚೇರಿಯು ಎಪಿಎಂಸಿ ರಸ್ತೆಯ ಮಾಣಾಯಿ ಆರ್ಚ್ ಸಂಕೀರ್ಣದಲ್ಲಿ ಸ್ವಂತ ಕಟ್ಟಡದಲ್ಲಿ ಪ್ರಾರಂಭಗೊಂಡಿದೆ. ಸಂಘದ ಮೂಲಕ ಶಾಖೆಗಳು ಆರಂಭಗೊಂಡಾಗ ಅಲ್ಲಿನ ಶಾಖೆಗೆ ಸಂಬಂಧಿಸಿ ನಮ್ಮ ನಿರ್ದೇಶಕರಲ್ಲೇ ಇಬ್ಬರನ್ನು ಸಲಹಾ ಸಮಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನಾಗಿ ಮಾಡುತ್ತಿದ್ದೇವೆ. ಅದೇ ರೀತಿ ಬೆಳ್ಳಾರೆ ಶಾಖೆಯಲ್ಲೂ ಅಧ್ಯಕ್ಷರಾಗಿ ಸಂಘದ ನಿರ್ದೇಶಕರಾದ ಸತೀಶ್ ಪಾಂಬಾರು ಮತ್ತು ಉಪಾಧ್ಯಕ್ಷರಾಗಿ ಲೋಕೇಶ್ ಚಾಕೋಟೆ ಅವರು ಕಾರ್ಯ ನಿರ್ವಹಿಸಲಿದ್ದಾರೆ. ಸಂಘದಲ್ಲಿ ಆಸ್ತಿ ಖರೀದಿ, ಅಡವು, ಮನೆ ನಿರ್ಮಾಣ, ವಾಹನ ಸಾಲ, ಠೇವಣಿ ಸಾಲ, ಜಾಮೀನು ಸಾಲ, ವ್ಯಾಪಾರ ಸಾಲ, ಚಿನ್ನಾಭರಣ ಅಡವು, ವೇತನ ಆಧಾರಿತ ಸಾಲ ಹೀಗೆ ವಿವಿಧ ರೀತಿಯ ಸಾಲಗಳನ್ನು ಆಕರ್ಷಕ ಬಡ್ಡಿಯಲ್ಲಿ ನೀಡಲಾಗುತ್ತಿದೆ. 2014ರಿಂದ ಆಡಿಟ್ ವರದಿಯಲ್ಲಿ ನಿರಂತರವಾಗಿ ’ಎ’ ತರಗತಿಯನ್ನೇ ಪಡೆಯುತ್ತಾ ಬಂದಿದೆ.

ಚಿದಾನಂದ ಬೈಲಾಡಿ, ಅಧ್ಯಕ್ಷರು,
ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ ಪುತ್ತೂರು

LEAVE A REPLY

Please enter your comment!
Please enter your name here