ವಿಟ್ಲ: ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಸುದೀರ್ಘವಾದ 55 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಪೌರೋಹಿತ್ಯವನ್ನು ಪೂರೈಸಿದ ಬಾಳ್ತಿಲ ಗ್ರಾಮದ ಕಶೆಕೋಡಿ ನಿವಾಸಿ ವೇದಮೂರ್ತಿ ಸೀತಾರಾಮ ನೂರಿತ್ತಾಯ(86)ರವರು ಜೂ.28 ರಂದು ನಿಧನರಾದರು.
ಕೃಷಿಕರೂ ಆಗಿರುವ ಅವರು ತನ್ನ ಪೌರೋಹಿತ್ಯದ ಸೇವೆಯಲ್ಲಿ ಸತ್ಯ ನಿಷ್ಠೆ ಪ್ರಾಮಾಣಿಕತೆಯಿಂದ ತೊಡಗಿಕೊಂಡು, ಅತ್ಯಂತ ಭಕ್ತಿಯಿಂದ ದೈವ ದೇವರ ಪೂಜೆಯನ್ನು ಮಾಡಿಕೊಂಡು ಬಂದಿದ್ದರು. ಮಾಣಿ ಗ್ರಾಮದಲ್ಲಿ ಹಿಂದಿನ ಕಾಲದಿಂದ ನಡೆದುಕೊಂಡು ಬರುತ್ತಿರುವ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಮತ್ತು ದೈವಗಳ ನೇಮೋತ್ಸವಗಳಲ್ಲಿ ಸಕ್ರಿಯರಾಗಿ ತನ್ನ ಪೂಜಾ ಕೈಂಕರ್ಯಗಳೊಂದಿಗೆ ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯೂ ಚಿಂತನೆಯನ್ನು ಮಾಡಿಕೊಂಡು ಬಂದಿದ್ದರು.
ಮೃತರು ಪತ್ನಿ, ಮಕ್ಕಳು ಮತ್ತು ಅಪಾರ ಬಂಧುಗಳನ್ನು ಅಗಲಿರುತ್ತಾರೆ. ಮಾಣಿಗುತ್ತು ಸಚಿನ್ ರೈ, ಅರೆಬೆಟ್ಟುಗುತ್ತು ಗುಡ್ಡ ಶೆಟ್ಟಿ ಯಾನೆ ರತ್ನಾಕರ ಭಂಡಾರಿ, ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು, ಜಗನ್ನಾಥ ಚೌಟ ಬದಿಗುಡ್ಡೆ, ಬಾಲಕೃಷ್ಣ ಆಳ್ವ ಕೊಡಾಜೆ, ಸದಾಶಿವ ಶೆಟ್ಟಿ ಶಂಭುಗ, ರಾಮಚಂದ್ರ ಪೂಜಾರಿ ಪಾದೆ, ಲೋಕೇಶ್ ಪೂಜಾರಿ ಪಲ್ಲತ್ತಿಲ ಮತ್ತಿತರರು ಭೇಟಿ ನೀಡಿ ಮೃತರ ಅಂತಮ ದರ್ಶನ ಪಡೆದರು.