ಪುತ್ತೂರು: ಪ್ರತಿ ತಿಂಗಳು ವಿಶೇಷ ಚಿಕಿತ್ಸೆಗಳನ್ನು ಅಳವಡಿಸಿಕೊಂಡು ಒಂದು ವರುಷ ಪೂರೈಸಿದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಉಚಿತ ವೈದ್ಯಕೀಯ ಶಿಬಿರದ 16 ನೇ ತಿಂಗಳ ವೈದ್ಯಕೀಯ ಶಿಬಿರವು ಜು.2ರಂದು ನಡೆಯಲಿದೆ.
ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿ ವತಿಯಿಂದ ನಡೆಯುವ ಶಿಬಿರದಲ್ಲಿ ತಜ್ಞರಿಂದ ವೈದ್ಯಕೀಯ ತಪಾಸಣೆ, ಕೀಲು ಮತ್ತು ಎಲುಬು ತಪಾಸಣೆ, ಇಓಖಿವೈದ್ಯಕೀಯ ತಪಾಸಣೆ, ಉದರ ಚಿಕಿತ್ಸಾ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ದಂತ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ, ಶ್ವಾಸಕೋಶದ ಪರೀಕ್ಷೆ ಹಾಗೂ ಉಚಿತ ಔಷಧಿಗಳನ್ನು ವಿತರಿಸಲಾಗುವುದು.
ತಜ್ಞ ವೈದ್ಯರಾದ ಡಾ. ಸುರೇಶ್ ಪುತ್ತೂರಾಯ, ಡಾ. ಸಮೀರ್ ಕೃಷ್ಣ, ಕೀಲು ಮತ್ತು ಎಲುಬು ತಜ್ಞ ಡಾ. ಸಚಿನ್ ಶಂಕರ್ ಹಾರಕೆರೆ, ಇಎನ್‌ಟಿ ತಜ್ಞೆ ಡಾ. ಅರ್ಚನಾ, ಎಂಡೋಸ್ಕೋಪಿ, ಉದರ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಅಶ್ವಿನ್ ಆಳ್ವ* ದಂತ ಚಿಕಿತ್ಸಾ ತಜ್ಞೆ ಡಾ. ಯಶ್ಮಿ, ಶ್ವಾಸಕೋಶ ತಜ್ಞ ಡಾ. ಪ್ರೀತಿರಾಜ್ ಬಲ್ಲಾಳ್, ಆಯುರ್ವೇದ ತಜ್ಞರಾದ ಡಾ. ವೇಣು ಗೋಪಾಲ್, ಡಾ. ಸಾಯಿ ಪ್ರಕಾಶ್ ಹಾಗೂ ಡಾ.ದೀಕ್ಷಾ ಚಿಕಿತ್ಸೆ ಹಾಗೂ ತಪಾಸಣೆಗಳನ್ನು ನಡೆಸಲಿದ್ದಾರೆ. ಭಕ್ತಾದಿಗಳು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿ ಪ್ರಕಟಣೆ ತಿಳಿಸಿದೆ.