ಪುತ್ತೂರು:ಯಾದವ ಸಭಾ ತಾಲೂಕು ಸಮಿತಿ, ಯುವ ವೇದಿಕೆ ಹಾಗೂ ಮಹಿಳಾ ವೇದಿಕೆಯ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆಯು ಜು.2 ರಂದು ಬೆಳಿಗ್ಗೆ ಪುತ್ತೂರಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಯಾಧವ ಸಭಾ ಕರ್ನಾಟಕ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಎ.ಕೆ ಮಣಿಯಾಣಿ ಬೆಳ್ಳಾರೆ ಉದ್ಘಾಟಿಸಲಿದ್ದಾರೆ. ಯಾಧವ ಸಭಾ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯಾಧವ ಸಭಾ ಕರ್ನಾಟಕ ಕೇಂದ್ರ ಸಮಿತಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಸದಾನಂದ ಕಾವೂರು, ಸಲಹಾ ಮಂಡಳಿ ಅಧ್ಯಕ್ಷ ಸುಧಾಮ ಆಲೆಟ್ಟಿ, ಕೋಶಾಧಿಕಾರಿ ರಾಮಚಂದ್ರ ಯಧುಗಿರಿ, ಸಿಬಂದಿ ಸೇವಾ ರಾಜ್ಯಪ್ರಶಸ್ತಿ ಪುರಸ್ಕೃತ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ರಾಮ್ ಕಣೆಮರಡ್ಕ ಆಗಮಿಸಲಿದ್ದಾರೆ. ಯಾಧವ ಸಭಾದ ಮಂಗಳೂರು ತಾಲೂಕು ಅಧ್ಯಕ್ಷ ಕೃಷ್ಣ ಬಿ.ಪಡೀಲ್, ಬಂಟ್ವಾಳ ಅಧ್ಯಕ್ಷ ಅಶೋಕ್ ಕುಮಾರ್, ಸುಳ್ಯದ ಅಧ್ಯಕ್ಷ ಕರುಣಾಕರ ಹಾಸ್ಪರೆ, ಬೆಟ್ಟಂಪಾಡಿ-ನಿಡ್ಪಳ್ಳಿ ಪ್ರಾದೇಶಿಕ ಸಮಿತಿ ಅಧ್ಯಕ್ಷ ಕೊಗ್ಗು ಮಣಿಯಾಣಿ, ಕುರಿಂಜ ಪ್ರಾದೇಶಿಕ ಸಮಿತಿ ಅಧ್ಯಕ್ಷ ಲೋಕೇಶ ಕುಂಟಾಪು, ಪುತ್ತೂರು ಪ್ರಾದೇಶಿಕ ಸಮಿತಿ ಅಧ್ಯಕ್ಷ ದಾಮೋದರ ಮಣಿಯಾಣಿ ಸಂಪ್ಯ ಹಾಗೂ ಪಾಣಾಜೆ ಪ್ರಾದೇಶಿಕ ಸಮಿತಿ ಅಧ್ಯಕ್ಷ ಧನಂಜಯ ಯಾಧವ್ ಗೌರವ ಉಪಸ್ಥಿತಿಯಿರುವರು.
ಕಾರ್ಯಕ್ರಮದಲ್ಲಿ 2022-23ನೇ ಸಾಲಿನ ಎಸ್ಎಸ್ಎಲ್ಸಿ, ಪಿಯುಸಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಶಿಕ್ಷಣದಲ್ಲಿ ತೇಗಡೆಯಾದವರಿಗೆ ಪ್ರತಿಭಾ ಪುರಸ್ಕಾರ, ಖಾಸಗಿ, ಸರಕಾರಿ ಸೇವೆಯಿಂದ ನಿವೃತ್ತರಾದವರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜ ಬಾಂಧವರನ್ನು ಸನ್ಮಾನ ಮತ್ತು 1ನೇತರಗತಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಗುವುದು ಎಂದು ಸಮಿತಿ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ತಿಳಿಸಿದ್ದಾರೆ.