ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

0

ಸವಾಲುಗಳನ್ನೆಲ್ಲ ಆತ್ಮವಿಶ್ವಾಸದಿಂದ ಎದುರಿಸಿದರೆ ಗೆಲುವು ನಿಶ್ಚಿತ- ಜಯಸೂರ್ಯ ರೈ ಮಾದೋಡಿ

ಕಾಣಿಯೂರು: ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ. ಸೋಲನ್ನು ಸವಾಲಾಗಿ ಸ್ವೀಕರಿಸಿದರೆ ಮುಂದೊಂದಿನ ಗೆಲುವು ನಿಶ್ಚಿತ ಎಂದು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಹೇಳಿದರು. ಪೋಷಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು .

ಸಭಾಧ್ಯಕ್ಷತೆಯನ್ನು ವಹಿಸಿದ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷಉಮೇಶ್ ಕೆ.ಎಂ. ಬಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಬೇಕಾಗುವ, ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಸಂಸ್ಥೆಯು ಅವಿರತವಾಗಿ ಶ್ರಮಿಸುತ್ತಿದೆ. ಸಂಸ್ಥೆಯ ಶಿಕ್ಷಕ ವೃಂದದವರ ಕಾರ್ಯವೈಖರಿಯನ್ನು ಎಲ್ಲರೂ ಮೆಚ್ಚಿ ತಕ್ಕಂತದೆ. ಪ್ರಗತಿಯ ಮಕ್ಕಳು ಎಲ್ಲಿಯೂ ಸೋಲಲಾರರು ಎಂದು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ಮುಖ್ಯಗುರು ಸರಸ್ವತಿ ಎಂ ಮಾತನಾಡಿ, ಪ್ರಸ್ತುತ ಶೈಕ್ಷಣಿಕ ವರ್ಷದ ಆಗು ಹೋಗುಗಳನ್ನು ವಿವರಿಸುತ್ತಾ ಸಂಸ್ಥೆ ಮುನ್ನಡೆಯುವಲ್ಲಿ ಪೋಷಕರ ಸಹಕಾರ ಅತೀ ಅಗತ್ಯ ಎಂದರು. ವೇದಿಕೆಯಲ್ಲಿ ಶಾಲಾ ಟ್ರಸ್ಟಿ ಹರಿಚರಣ್ ರೈ ಮಾದೋಡಿ ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ಜ್ಞಾನೇಶ್ವರಿ ಹಿರಿಯ ಶಿಕ್ಷಕಿಯರಾದ ಹೇಮಾ ನಾಗೇಶ್ ರೈ ಮಾಳ , ಸವಿತಾ, ವೀಣಲತಾ ಉಪಸ್ಥಿತರಿದ್ದರು. ಶಾಲಾ ಆಡಳಿತಾಧಿಕಾರಿಯಾದ ವಸಂತ ರೈ ಕಾರ್ಕಳ ಸ್ವಾಗತದೊಂದಿಗೆ ಪ್ರಾಸ್ತಾವಿಕ ಮಾತನಾಡಿದರು. ಪೋಷಕರಾದ ಮಾಲತಿ ಪ್ರಾರ್ಥಿಸಿದರು . ಹಿರಿಯ ಶಿಕ್ಷಕಿಯರಾದ ವಿನಯ ವಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಅನಿತಾ ಜೆ ರೈ ವಂದಿಸಿದರು. ಈ ಸಂದರ್ಭದಲ್ಲಿ ಪ್ರತಿ ತರಗತಿವಾರು ಶಿಕ್ಷಕ ರಕ್ಷಕ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.

LEAVE A REPLY

Please enter your comment!
Please enter your name here