ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ, ಸ.ಪ.ಪೂ.ಕಾಲೇಜು ಸವಣೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಪಾಲ್ತಾಡಿ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ಜೂ. 30 ರಂದು ಸವಣೂರು ಸ.ಪ.ಪೂ.ಕಾಲೇಜ್ ನಲ್ಲಿ ನಡೆಯಿತು.
ಕಡಬ ಶ್ರೀ ದುರ್ಗಾಂಬ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆರವರು ಉದ್ಘಾಟನೆ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಡಬ ತಾಲ್ಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು ವಹಿಸಿದರು. ವೇದಿಕೆಯಲ್ಲಿ ಕಾಲೇಜಿನ ಕಾರ್ಯಧ್ಯಕ್ಷ ಗಿರಿಶಂಕರ್ ಸುಲಾಯ, ಪ್ರಾಂಶುಪಾಲೆ ಪದ್ಮಾವತಿ ಎನ್.ಪಿ, ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ. ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ ಗೌಡ ಉಪಸ್ಥಿತರಿದ್ದರು. ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ.ಮಧುಶ್ರೀರವರು ಸಂಪನ್ಮೂಲ ವ್ಯಕ್ತಿ ಯಾಗಿ ಆರೋಗ್ಯ ಮಾಹಿತಿಯನ್ನು ನೀಡಿದರು. ತಾಲ್ಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾರಂಭದಲ್ಲಿ ತಾರಾನಾಥ ಕಾಯರ್ಗ, ಚೇತನ್ ಕುಮಾರ್ ಕೋಡಿಬೈಲು, ನಾರಾಯಣ ಗೌಡ ಪೂವ, ವೇಣುಗೋಪಾಲ ಕಳುವಾಜೆ ಸಹಿತ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಪ್ರೇಮಾ ಸ್ವಾಗತಿಸಿ, ಯೋಜನೆಯ ಮೇಲ್ವಿಚಾರಕಿ ಹರ್ಷಕುಮಾರಿ ಕಾರ್ಯಕ್ರಮ ನಿರೂಪಿಸಿದರು.
ಚಿತ್ರ ಮತ್ತು ವರದಿ. ಉಮಾಪ್ರಸಾದ್ ರೈ