ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಯುವತಿ ಜೊತೆ ದೈಹಿಕ ಸಂಪರ್ಕ; ಕಡಬದ ವಿವಾಹಿತ ಯುವಕನ ಬಂಧನ

0

ಕಡಬ: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಕಡಬದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಡಬ ಸಮೀಪದ ಕೋಡಿಂಬಾಳ ನಿವಾಸಿ ಅನೀಶ್ ಬಂಧಿತ ಆರೋಪಿ.

ಆರೋಪಿಯು ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಂಗಳೂರಿನ ಯುವತಿಯನ್ನು ಪ್ರೀತಿಸುವುದಾಗಿ ತಿಳಿಸಿ ಆ ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದಲ್ಲದೆ ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸುಮಾರು 20 ದಿನಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದಾನೆ ಎನ್ನಲಾಗಿದೆ. ಆರೋಪಿಗೆ ಈ ಮೊದಲೇ ಮದುವೆಯಾಗಿರುವ ವಿಚಾರ ಯುವತಿಗೆ ತಡವಾಗಿ ತಿಳಿದುಬಂದ ಹಿನ್ನೆಲೆಯಲ್ಲಿ ತನಗಾಗಿರುವ ತೊಂದರೆಯ ಬಗ್ಗೆ ಮನೆಯವರಲ್ಲಿ ತಿಳಿಸಿದ ಯುವತಿಯು ಬಳಿಕ ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ಮಹಿಳೆಯ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ 52/2023 ಕಲಂ 417, 376, 506 ಐಪಿಸಿಯಂತೆ ಕೇಸು ದಾಖಲಾಗಿರುತ್ತದೆ. ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಅನೀಶ್ ರೆಹಮಾನ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 40/2023 ಕಲಂ 27 ಬಿ.ಎನ್.ಡಿ.ಪಿ.ಎಸ್. ಆಕ್ಟ್‌ನಂತೆ ಕೂಡಾ ಪ್ರಕರಣ ದಾಖಲಾಗಿರುತ್ತದೆ.

LEAVE A REPLY

Please enter your comment!
Please enter your name here