ಬೆಳಂದೂರು ಸರಕಾರಿ ಪ್ರಥಮ‌ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ

0

ಕಾಣಿಯೂರು: ಬೆಳಂದೂರು ಸರಕಾರಿ‌ ಪ್ರಥಮ‌ ದರ್ಜೆ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಕಾಲೇಜು ವಾರ್ಷಿಕೋತ್ಸವವನ್ನು ಏರ್ಪಡಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆಯನ್ನು ಬೆಳಂದೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಳ್ಳಾರೆ ಡಾ.ಕೆ .ಶಿವರಾಮ ಕಾರಂತ ಸರ್ಕಾರಿ‌ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರ ಪ್ರೊ.ದಾಮೋದರ ಕಣಜಾಲು ವಿಶೇಷ ಉಪನ್ಯಾಸ ನೀಡಿದರು.


ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಶ್ರೀಧರ ರೈ ಮಾದೋಡಿ, ಶೀನಪ್ಪ ಗೌಡ ಬೈತಡ್ಕ, ಸಂಪತ್ ಕುಮಾರ್ ರೈ ಪಾತಾಜೆ, ಸೀತಾರಾಮ ಗೌಡ ಮುಂಡಾಲ, ಸಂತೋಷ್ ಕುಮಾರ್ ಮರಕ್ಕಡ, ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿಠಲ ಗೌಡ ಅಗಳಿ, ರಾಮಚಂದ್ರ ಕಲ್ಲೂರಾಯ, ಐಕ್ಯೂಎಸಿ ಸಂಚಾಲಕ ವೆಂಕಟೇಶ್ ಪ್ರಸನ್ನ, ಕಾಲೇಜಿನ ಸಾಂಸ್ಕೃತಿಕ ಸಂಚಾಲಕ ಸ್ವಾಮಿ ಎಸ್, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಉಜಿತ್ ಶ್ಯಾಮ್, ಹರ್ಷಿತಾ, ಕ್ರೀಡಾ ಕಾರ್ಯದರ್ಶಿಗಳಾದ ಧನುಷ್, ಅಸ್ಮಿತಾ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಏರ್ಪಡಿಸಲಾಗಿದ್ದ ವಿವಿದ ಕ್ರೀಡಾ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.


ಕನ್ನಡ ಉಪನ್ಯಾಸಕಿ ರಶ್ಮಿ ಕಾರ್ಯಕ್ರಮ ನಿರೂಪಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ರೇಷ್ಮಾ ವಂದಿಸಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ,ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here