ಬಂಟ್ವಾಳದಲ್ಲಿ ಹಿರಿಯ ಕಾರ್ಯಕರ್ತರ ಸಂವಾದ ಕಾರ್ಯಕ್ರಮ

0

ಭಾರತವನ್ನು ಗುರುತಿಸುವ ರೀತಿಯಲ್ಲಿ ಮುನ್ನೆಡೆಸಿದ ನರೇಂದ್ರ ಮೋದಿಯವರ ಸಮರ್ಥ ನಾಯಕ : ರಾಜೇಶ್ ನಾಯ್ಕ್

ವಿಟ್ಲ: ಜಗತ್ತಿನಲ್ಲಿಯೇ ಭಾರತವನ್ನು ಗುರುತಿಸುವ ರೀತಿಯಲ್ಲಿ ಮುನ್ನೆಡೆಸಿದ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವವನ್ನು ದೇಶದ ಜನ ಒಪ್ಪಿಕೊಂಡಿದ್ದಾರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ನೇತೃತ್ವದ ಮೋದಿಯವರ ಆಡಳಿತಕ್ಕೆ ಜನ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.

ಅವರು ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಬಿಜೆಪಿ ಮಂಡಲ ವತಿಯಿಂದ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ “ವಿಶೇಷ ಜನಸಂಪರ್ಕ ಅಭಿಯಾನ ” ಅಡಿಯಲ್ಲಿ ಹಿರಿಯ ಕಾರ್ಯಕರ್ತರ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಡದೇಶ, ಬೇಡುವ ದೇಶ ಎಂಬ ಚಿತ್ರಣದಲ್ಲಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ ಆದ ಬಳಿಕ ಬೇಡುವ ದೇಶ ಎಂಬ ಹೆಸರನ್ನು ತೆಗೆದುಹಾಕಿ ಇತರರಿಗೆ ಕೊಡುವ ದೇಶ ಎಂಬ ರೀತಿಯಲ್ಲಿ ಬೆಳವಣಿಗೆಗೆ ಕಾರಣವಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಆಡಳಿತ ಮತ್ತೆ ಭಾರತಕ್ಕೆ ಅಗತ್ಯವಿದೆ ಎಂದು ಅವರು ತಿಳಿಸಿದರು. ಪಕ್ಷವನ್ನು ಕಟ್ಟಿ ಬೆಳೆಸಿದ, ಪಕ್ಷಕ್ಕೆ ಪ್ರಾಣ ತ್ಯಾಗ ಹಿರಿಯರ ನೆನಪು ಮಾಡಬೇಕಾಗಿದೆ,ಇದರ ಜೊತೆಗೆ ಪಕ್ಷ ಇನ್ನಷ್ಟು ಬೆಳೆಯುವ ನಿಟ್ಟಿನಲ್ಲಿ ಪಕ್ಷದ ಹಿರಿಯರ ಆಶೀರ್ವಾದ ಅತ್ಯಂತ ಅಗತ್ಯವಾಗಿದೆ. ಎರಡನೇ ಬಾರಿಗೆ ನಿಮ್ಮ ಪ್ರತಿನಿಧಿಯಾಗಿ ಆರಿಸಿಕಳಹಿಸಿದ ನಿಮ್ಮ ನಿರೀಕ್ಷೆಗೆ ಮೀರಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದ ಅವರು ನಿಮ್ಮ ಭಾವನೆಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಅವರು ತಿಳಿಸಿದರು.

ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಅಧ್ಯಕ್ಷ ವಹಿಸಿ ಮಾತನಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಕಾರ್ನಿಕ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಭಾರತವನ್ನು ಪರಮವೈಭವದ ಸ್ಥಿತಿಗೆ ತೆಗೆದುಕೊಂಡು ಹೋಗಲು ಮಾಡಿದ ಮತ್ತು ಮುಂದೆ ಆಗಲಿರುವ ಇನ್ನಷ್ಟು ಯೋಜನೆಗಳಿಗೆ ಶಕ್ತಿ ತುಂಬುವ ಕೆಲಸ ಆಗಬೇಕು,ಅದಕ್ಕೆ ನಮ್ಮೆಲ್ಲರ ಸಹಕಾರ ಬೇಕಾಗಿದೆ.ಮತ್ತು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಪ್ರಧಾನಿ ನೇತ್ರತ್ವದ ಬಿಜೆಪಿ ಕೇಂದ್ರದಲ್ಲಿ ಆಡಳಿತಕ್ಕೆ ಪೂರಕವಾಗಿ ನಾವೇನು ಮಾಡಬೇಕು ಎಂಬುದರ ಚಿಂತನೆ ಆಗಬೇಕು ಎಂಬ ದೃಷ್ಟಿಯಿಂದ ಅಭಿಯಾನ ಕಾರ್ಯಕ್ರಮ ನಡೆಸಿದ್ದೇವೆ ಎಂದು ಅವರು ತಿಳಿಸಿದ್ದೇವೆ.

ವೇದಿಕೆಯಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ರಾಜ್ಯ ವಕ್ತಾರ ವಿಕಾಸ್ ಪುತ್ತೂರು, ಹಿರಿಯ ಪ್ರಕೋಷ್ಟದ ಸಂಚಾಲಕ ಗೋಪಾಲ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here