7 ವರ್ಷದ ಹಿಂದೆ ಗಂಡ ಮೃತಪಟ್ಟ ಸ್ಥಳದಲ್ಲೇ ಮಹಿಳೆ ಆತ್ಮಹತ್ಯೆ !

0

ಪುರುಷರಕಟ್ಟೆ ಇಂದಿರಾನಗರದಲ್ಲಿ ನಡೆದ ಘಟನೆ

ಪುತ್ತೂರು: 7 ವರ್ಷದ ಹಿಂದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಆತನ ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಜು.1ರಂದು ಮಹಿಳೆಯ ಮೃತ ದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.


ಪುರುಷರಕಟ್ಟೆ ಇಂದಿರಾನಗರ ದಿ.ಪ್ರವೀಣ್ ಎಂಬವರ ಪತ್ನಿ ಕಾವ್ಯ(38ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. 7 ವರ್ಷದ ಹಿಂದೆ ಅವರ ಪತಿ ಪ್ರವೀಣ್ ಅವರು ಕೂಡಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಕಾವ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂ.30ರಂದು ಕಾವ್ಯ ಅವರ ಪುತ್ರ ಪ್ರತೀಕ್ ಎಂಬವರು ಬೆದ್ರಾಳ ಸಮೀಪ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇದರ ಬೆನ್ನಲ್ಲೇ ಆತನ ತಾಯಿ ಕಾವ್ಯ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here