ಆಲಂಕಾರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಕಡಬ ತಾಲೂಕು ಅಲಂಕಾರು ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಲಂಕಾರು ವಲಯ ಇದರ ಆಶ್ರಯದಲ್ಲಿ ಶ್ರೀ ದುರ್ಗಾಂಬ ಪದವಿಪೂರ್ವ ಕಾಲೇಜ್ ನ ವಿದ್ಯಾರ್ಥಿಗಳಿಗೆ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮ ದುರ್ಗಾಂಬಾ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಲಂಕಾರು ವಲಯ ಅಧ್ಯಕ್ಷ ಶೇಖರ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಶ್ರೀ ದುರ್ಗಾಂಬ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನವೀನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು, ಸಂಪನ್ಮೂಲ ವ್ಯಕ್ತಿಯಾಗಿ ಭಾರತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸತೀಶ್ ಬಲ್ಯ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಅಲಂಕಾರು ಆರೋಗ್ಯ ಅಧಿಕಾರಿ ಯಸ್ಮಿತಾ ವಿದ್ಯಾರ್ಥಿಗಳಲ್ಲಿ ಮಾದಕ ಸೇವನೆಯ ಹಂತಗಳು ಮತ್ತು ಇದರಿಂದ ಆರೋಗ್ಯದಲ್ಲಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ಶ್ರೀ ದುರ್ಗಾಂಬಾ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಶ್ರೀ ಪತಿ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭಹಾರೈಸಿದರು. ವೇದಿಕೆಯಲ್ಲಿ ಗ್ರಾಮಪಂಚಾಯತ್ ಸದಸ್ಯ ಶಾರದ, ಒಕ್ಕೂಟದ ಅಧ್ಯಕ್ಷ ವಾರಿಜ ಪುಷ್ಪಪಾವತಿ ಅರೋಗ್ಯ ಕಾರ್ಯಕರ್ತೆ ಸರೋಜಿನಿ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಚೇತನ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ಉಪನ್ಯಾಸಕಿ ರೂಪಾ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಶಿಕ್ಷಕ ಜನಾರ್ಧನ್ ಧನ್ಯವಾದ ನೇರವೆರಿಸಿದರು.
ಆಂತರಿಕ ಲೆಕ್ಕ ಪರಿಶೋಧಕಿ ಶೀಲಾವತಿ, ವಲಯದ ಸೇವಾ ಪ್ರತಿನಿಧಿಗಳಾದ ಸವಿತಾ ,ಮೋಹಿನಿ, ಪ್ರೇಮ, ವೇದಾವತಿ ,ನಿಕಟ ಪೂರ್ವ ಒಕ್ಕೂಟದ ಅಧ್ಯಕ್ಷ ಶ್ರೀನಪ್ಪ ಕುಂಬಾರ , ಹರೀಶ್, ಜನಜಾಗ್ರತಿ ವೇದಿಕೆಯ ಸದಸ್ಯೆ ಮೀನಾಕ್ಷಿ ಕಾರ್ಯಕ್ರಮದಲ್ಲಿ ಸಹಕರಿಸಿದರು. ಕಾಲೇಜಿನ ಎಲ್ಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಭಾಗವಹಿಸಿ ಮಾಹಿತಿ ಪಡೆದುಕೊಂಡರು.