ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹತ್ತು ಮಂದಿ ಗೃಹ ರಕ್ಷಕ ದಳದ ಸಿಬ್ಬಂದಿಗೆ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಕೆ.ಬಿ.ಯವರ ನೇತೃತ್ವದಲ್ಲಿ ರೈನ್ ಕೋಟ್ ವಿತರಿಸಲಾಯಿತು.
ಮಳೆಗಾಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹ ರಕ್ಷಕ ದಳದ ಸಿಬ್ಬಂದಿಯು ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ರೈನ್ ಕೋಟ್ ವಿತರಣೆಗೆ ಗಮನ ಹರಿಸಲಾಗಿದೆ ಎಂದು ಡಾ. ರಾಜಾರಾಮ ಕೆ.ಬಿ. ಅವರು ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಂದಾಳುಗಳಾದ ಅಜೀಜ್ ಬಸ್ತಿಕಾರ್, ಕೃಷ್ಣ ರಾವ್ ಅರ್ತಿಲ, ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ಉಪಸ್ಥಿತರಿದ್ದರು.