ಬನ್ನೂರಿನಲ್ಲಿ ಮೆಡಿಕಲ್ ಕಾಲೇಜಿನ ಸ್ಥಳ ವೀಕ್ಷಣೆ-ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡಿಯೇ ಸಿದ್ದ: ಶಾಸಕ ಅಶೋಕ್ ಕುಮಾರ್ ರೈ

0

ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕು ಎಂಬ ಆಗ್ರಹ ನನಗೆ ಶಾಸಕನಾಗುವ ಮೊದಲೇ ಇತ್ತು, ಅಭಿವೃದ್ದಿಯಾಗುತ್ತಿರುವ ಪುತ್ತೂರಿಗೆ ಈ ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದ್ದು ಕ್ಯಾಬಿನೆಟ್‌ನಲ್ಲಿ ಅನುಮೋದನೆ ಮಾಡಿಸಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿಯೇ ಸಿದ್ದ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ಜು.2 ರಂದು ಮೆಡಿಕಲ್ ಕಾಲೇಜಿಗೆ ನಿಗದಿಪಡಿಸಲಾದ ಜಾಗವನ್ನು ವೀಕ್ಷಣೆ ಮಾಡಿದರು. ಸುಮಾರು 40 ಎಕ್ರೆ ಸರಕಾರಿ ಜಾಗವನ್ನು ಕಾಲೇಜು ನಿರ್ಮಾಣಕ್ಕೆ ಕಾಯ್ದಿರಿಸಲಾಗಿದೆ. ದ ಕ ಜಿಲ್ಲಾಧಿಕಾರಿಯಾಗಿದ್ದ ಎ ಬಿ ಇಬ್ರಾಹಿಂರವರ ಕಾಲಾವದಿಯಲ್ಲಿ ಜಾಗವನ್ನು ಗುರುತಿಸಿ ಸರಕಾರದ ಸ್ವಾಧೀನಕ್ಕೊಳಪಡಿಸಲಾಗಿತ್ತು. ಅದೇ ಸ್ಥಳದಲ್ಲಿ ಮುಂದೆ ಮೆಡಿಕಲ್ ಕಾಲೇಜು ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕರು ಹೇಳಿದರು.


ಪುತ್ತೂರು ಕ್ಷೇತ್ರ ಅಭಿವೃದ್ದಿಯಾಗಬೇಕಾದರೆ ಬೃಹತ್ ಯೋಜನೆಗಳು ಕ್ಷೇತ್ರಕ್ಕೆ ಬರಬೇಕು. ಹೆಚ್ಚು ಹೆಚ್ಚು ಅನುದಾನಗಳೂ ಬರಬೇಕಿದೆ. ಉದ್ಯಮಗಳು ಆರಂಭವಾದೊಡನೆ ಸಾವಿರಾರು ಜನರಿಗೆ ಉದ್ಯೋಗವೂ ದೊರೆಯಲಿದೆ ಎಂದು ಶಾಸಕರು ಹೇಳಿದರು.


ಮೆಡಿಕಲ್ ಕಾಲೇಜು ಫೈಲ್ ಇದುವರೆಗೂ ತಲುಪುವಲ್ಲಿಗೆ ತಲುಪಿರಲಿಲ್ಲ, ಪುತ್ತೂರು ತಾಪಂ ಕಚೇರಿಯಲ್ಲಿ ಕೊಳೆಯುತ್ತಿದ್ದ ಕಡತವನ್ನು ಮುಟ್ಟಿಸುವಲ್ಲಿಗೆ ಮುಟ್ಟಿಸುವ ಕೆಲಸವನ್ನು ಮಾಡಿದ್ದೇನೆ ಮೊದಲ ಅಧ್ಯತೆಯಲ್ಲೇ ಕಾಲೇಜು ಸ್ಥಾಪನೆಯಾಗಲಿದೆ ಎಂದು ಶಾಸಕರು ಹೇಳಿದರು.


ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಜಾರಾಂ ಕೆ ಬಿ, ಮಾಜಿ ಅಧ್ಯಕ್ಷ ಮುರಳೀದರ್ ರೈ ಮಠಂತಬೆಟ್ಟು, ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here