ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಮಾಹಿತಿ ಕಾರ್ಯಾಗಾರ 

0

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಲಾ ಸಂಘದ ವತಿಯಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರವನ್ನು ಜು.1ರಂದು ಆಯೋಜಿಸಲಾಗಿತ್ತು.

 ಸಂಪನ್ಮೂಲ ವ್ಯಕ್ತಿಗಳಾಗಿ  ಆಗಮಿಸಿದ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಆಕಾಶ್ ಪಿ, ನಿಖಿಲ್ ಹಾಗೂ ಅನನ್ಯ.ಪಿ ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಲಾ ಸಂಘದ ಸಂಯೋಜಕಿ ಮೋನಿಷಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ತೃಪ್ತಿ ಸ್ವಾಗತಿಸಿ, ಖುಷಿಬೇನ್ ವಂದಿಸಿದರು. ವಿದ್ಯಾರ್ಥಿನಿ ಪೂರ್ವಿಕ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here