ಉಪ್ಪಿನಂಗಡಿ: ಕಾರಿಗೆ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿ

0

ಉಪ್ಪಿನಂಗಡಿ: ಅಟೋ ರಿಕ್ಷಾವೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ಜು.2ರಂದು ರಾತ್ರಿ ನಡೆದಿದ್ದು, ವಾಹನಗಳಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.


ಇಲ್ಲಿನ ಉಪ್ಪಿನಂಗಡಿ – ಗುರುವಾಯನಕೆರೆ ರಸ್ತೆಯಲ್ಲಿ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಅಟೋ ರಿಕ್ಷಾವೊಂದು ಉಪ್ಪಿನಂಗಡಿ ಕಡೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ರಿಕ್ಷಾವು ಮಗುಚಿ ಬಿದ್ದಿದೆ. ರಿಕ್ಷಾದಲ್ಲಿ ಚಾಲಕ ಮಾತ್ರವಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ಕಾರಿನ ಹಾಗೂ ರಿಕ್ಷಾದ ಮುಂಭಾಗ ಜಖಂಗೊಂಡಿವೆ. ರಿಕ್ಷಾ ಚಾಲಕನ ಅಜಾಗರೂಕತೆ, ಅತೀ ವೇಗದ ಚಾಲನೆಯೇ ಘಟನೆಗೆ ಕಾರಣವೆನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here