ಈಶ್ವರಮಂಗಲ: ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಹಿರಿಯ ಸದಸ್ಯರಿಗೆ ಸನ್ಮಾನ

0

ಪುತ್ತೂರು: ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಕಾವು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ನವೋದಯ ಒಕ್ಕೂಟ ಈಶ್ವರಮಂಗಲ ಇದರ ಸಹಯೋಗದೊಂದಿಗೆ ನವೋದಯ ಸಂಘದ ಸದಸ್ಯರಿಗೆ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಹಿರಿಯ ಸದಸ್ಯೆಗೆ ಸನ್ಮಾನ, ಸಂಘದ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಜು.2 ರಂದು ಈಶ್ವರಮಂಗಲ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲಾ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ವಹಿಸಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟುರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೇಂದ್ರ ಬ್ಯಾಂಕ್ ಈಶ್ವರಮಂಗಲ ಶಾಖೆಯ ಶಾಖಾ ವ್ಯವಸ್ಥಾಪಕ ದಾಮೋದರ್, ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಕೇಶವ ಮೂರ್ತಿ, ನವೋದಯ ಒಕ್ಕೂಟದ ಅಧ್ಯಕ್ಷ ರತ್ನಕುಮಾರ್ ಉಪಸ್ಥಿತರಿದ್ದರು. ಕಾವು ವಲಯದ ನವೋದಯ ಪ್ರೇರಕಿ ಮಾಧವಿ ಆಚಾರ್ಯ ಸ್ವಾಗತಿಸಿ, ಪ್ರಶಾಂತ್, ಜಲಜಾಕ್ಷಿ, ವೆಂಕಪ್ಪ, ಇಂದಿರಾ ಹೂ ನೀಡಿ ಸ್ವಾಗತಿಸಿದರು. ರತ್ನಕುಮಾರ್ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.


ಹಿರಿಯ ಸದಸ್ಯೆಗೆ ಸನ್ಮಾನ
ನವೋದಯ ಒಕ್ಕೂಟದ ಹಿರಿಯ ಸದಸ್ಯೆ 82 ರ ಹರೆಯದ ಕರ್ನೂರು ಮೇಗಿನಮನೆ ರಾಜೀವಿ ರೈಯವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನವೋದಯದ 10 ಗುಂಪುಗಳಿಗೆ ಸಮವಸ್ತ್ರ ವಿತರಿಸಲಾಯಿತು.


ಪುಸ್ತಕ ವಿತರಣೆ
ನವೋದಯ ಸಂಘದ ಸದಸ್ಯರ ಮಕ್ಕಳಿಗೆ ಪುಸ್ತಕ ವಿತರಿಸಲಾಯಿತು. ಸುಮಾರು ೧೦೦ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪುಸ್ತಕ ವಿತರಿಸಲಾಯಿತು.

LEAVE A REPLY

Please enter your comment!
Please enter your name here