ರಾಮಕುಂಜ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಬಿದ್ದ ಪರಿಣಾಮ ಸುಮಾರು 1 ತಾಸಿಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.3ರಂದು ಸಂಜೆ ನಡೆದಿದೆ.
ಸಂಜೆ ಸುರಿದ ಮಳೆಯ ಸಂದರ್ಭ ಹೆದ್ದಾರಿ ಬದಿಯಲ್ಲಿದ್ದ ಬೃಹತ್ ಮರವೊಂದು ಮುರಿದು ಹೆದ್ದಾರಿಗೆ ಅಡ್ಡವಾಗಿ ಬಿದ್ದಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳೀಯರು ಮರ ತೆರವುಗೊಳಿಸಿದರು. ಬಳಿಕ ವಾಹನ ಸಂಚಾರ ಪುನರಾರಂಭಗೊಂಡಿತು.