ನೆಲ್ಯಾಡಿ: ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣದ ಮೂಲಕ ಎಲ್ಲರ ಮನೆ ಮಾತಾಗಿರುವ ಗೋಳಿತ್ತಟ್ಟು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಕಂಪ್ಯೂಟರ್ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಾಲಕೃಷ್ಣ ಪೂಜಾರಿ ಡೆಂಬಲೆಯವರು ರೂ.25 ಸಾವಿರ ವೆಚ್ಚದ ಕಂಪ್ಯೂಟರನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು. ಬಾಲಕೃಷ್ಣ ಡೆಂಬಲೆಯವರ ಪತ್ನಿ ವಿನೋದಾ ಬಾಲಕೃಷ್ಣರವರು ಕೊಡುಗೆಯನ್ನು ಶಾಲೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಊರ ಪ್ರಮುಖರು ಉಪಸ್ಥಿತರಿದ್ದರು.