





ರಾಮಕುಂಜ: ಶ್ರೀ ರಾಮಕುಂಜೇಶ್ವರ ಕಿಂಡರ್‌ಗಾರ್ಟನ್‌ನಲ್ಲಿ ಗುರುಪೂರ್ಣಿಮೆಯನ್ನು ಪೇಜಾವ ಮಠಾಧೀಶರಾಗಿದ್ದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಸ್ಮರಣಾರ್ಥ ಸ್ಥಾಪಿತವಾದ ಧ್ಯಾನಮಂದಿರದಲ್ಲಿ ಸರಳವಾಗಿ ಆಚರಿಸಲಾಯಿತು.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಮಾತನಾಡಿ, ಗುರುಗಳ ಹಾಗೂ ತಾಯಿ ಶಾರದೆಯ ಕೃಪಾಕಟಾಕ್ಷ ಸದಾ ಮಕ್ಕಳ ಮೇಲಿರಲಿ ಎಂದು ಹೇಳಿದರು. ಸಂಸ್ಥೆಯ ಮುಖ್ಯೋಪಾಧ್ಯಾಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.











