ಬೆಂಗಳೂರು:ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜು.4ರಿಂದ ಜು.7ರವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಜು.4ರಿಂದ ಜು.7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರಿನಲ್ಲಿ ಜು.5ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಜು.3ರಂದು ಪುತ್ತೂರು,ಕಡಬ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆ ಸುರಿದಿದೆ.